BREAKING NEWS

2019ರ ದ್ವೇಷ ಭಾಷಣ ಪ್ರಕರಣ: ಎಸ್‌ಪಿ ನಾಯಕ ಅಜಂ ಖಾನ್​​ಗೆ 2 ವರ್ಷ ಜೈಲು ಶಿಕ್ಷೆ

ಲಖನೌ: 2019ರ ಲೋಕಸಭಾ ಚುನಾವಣೆಯ ಪ್ರಚಾರದ ವೇಳೆ ಸಮಾಜವಾದಿ ಪಕ್ಷದ (ಎಸ್‌ಪಿ) ನಾಐಕ ಅಜಂ ಖಾನ್‌ ವಿರುದ್ಧ ದಾಖಲಾಗಿದ್ದ ದ್ವೇಷ ಭಾಷಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು (ಜು.15) ರಾಂಪುರ ನ್ಯಾಯಾಲಯ ಅವರನ್ನು ದೋಷಿ ಎಂದು ಘೋಷಿಸಿದ್ದು, ಅವರಿಗೆ ಎರಡು ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿದೆ.

ಅಜಂ ಖಾನ್ 2019ರ ಲೋಕಸಭೆ ಚುನಾವಣೆಯಲ್ಲಿ ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷ ಮತ್ತು ಮಾಯಾವತಿ ಅವರ ಜತೆಗಿನ ಮೈತ್ರಿಕೂಟದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಈ ಸಂದರ್ಭದಲ್ಲಿ ರಾಂಪುರ ಜಿಲ್ಲಾ ಮ್ಯಾಜಿಸ್ಟ್ರೇಟ್ ಔಂಜನೇಯ ಕುಮಾರ್ ಸಿಂಗ್ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಅವಹೇಳನಕಾರಿ ಹೇಳಿಕೆಯನ್ನು ನೀಡಿದ್ದರು. ಈ ಕಾರಣಕ್ಕೆ ಅಜಂ ಖಾನ್ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ಅಜಂ ಖಾನ್ ಮಾಡಿದ ಭಾಷಣದ ವೀಡಿಯೊ ಎಲ್ಲ ಕಡೆ ವೈರಲ್​​ ಆಗಿತ್ತು. ಇದನ್ನು ಸಾಕ್ಷಿಯಾಗಿರಿಸಿಕೊಂಡಿದ್ದ ರಾಂಪುರ ಜಿಲ್ಲೆಯ ಸಹಾಯಕ ಅಭಿವೃದ್ಧಿ ಅಧಿಕಾರಿ (ಪಂಚಾಯತ್) ಅನಿಲ್ ಕುಮಾರ್ ಚೌಹಾಣ್ ಅವರು ಶಹಜಾದ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

2019ರಲ್ಲಿ ದ್ವೇಷ ಭಾಷಣದ ಮತ್ತೊಂದು ಪ್ರಕರಣದಲ್ಲಿ ಅಜಂ ಖಾನ್ ಅವರನ್ನು ದೋಷಿ ಎಂದು ಘೋಷಿಸಲಾಯಿತು ಮತ್ತು ಅಕ್ಟೋಬರ್ 17, 2022ರಂದು ಜನಪ್ರತಿನಿಧಿಗಳ ನ್ಯಾಯಾಲಯವು ಮೂರು ವರ್ಷಗಳ ಕಾಲ ಅವರಿಗೆ ಜೈಲು ಶಿಕ್ಷೆಯನ್ನು ವಿಧಿಸಿತು, ನಂತರ ಅವರನ್ನು ಉತ್ತರ ಪ್ರದೇಶ ವಿಧಾನಸಭೆಯಿಂದ ಅನರ್ಹಗೊಳಿಸಲಾಗಿತ್ತು. 2023ರ ಮೇ ತಿಂಗಳಲ್ಲಿ ಇವರನ್ನು ವಿಚಾರಣೆ ನಡೆಸಿದ ಸೆಷನ್ಸ್ ನ್ಯಾಯಾಲಯವು ಅವರ ಮೇಲಿನ ದೋಷಾರೋಪಣೆಯನ್ನು ರದ್ದುಗೊಳಿಸಿತು ಮತ್ತು ಪ್ರಕರಣದಲ್ಲಿ ಅಜಂ ಖಾನ್ ಅವರನ್ನು ಖುಲಾಸೆಗೊಳಿಸಿತು.

ಅಜಂ ಖಾನ್ ಅವರನ್ನು ವಿಧಾನಸಭೆಯಿಂದ ಅನರ್ಹಗೊಳಿಸಿದ ನಂತರ, ರಾಂಪುರ ಸದರ್ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯಿತು. ಈ ಚುನಾವಣೆಯಲ್ಲಿ ಅಜಂ ಖಾನ್ ಅವರ ಮೇಲೆ ದ್ವೇಷ ಭಾಷಣ ವಿರುದ್ಧ ದೂರು ನೀಡಿದ್ದ ಮತ್ತೊಬ್ಬ ವ್ಯಕ್ತಿ ಆಕಾಶ್ ಸಕ್ಸೇನಾ ಅವರನ್ನು ಬಿಜೆಪಿಯ ಅಭ್ಯರ್ಥಿಯಾಗಿ ಸ್ಪರ್ಧೆಗೆ ಇಳಿಸಿದರು, ಇದರ ಜತೆಗೆ ಅಜಂ ಖಾನ್ ಅವರ ಆಪ್ತ ಸಹಾಯಕ ಎಸ್‌ಪಿ ಅಭ್ಯರ್ಥಿ ಅಸಿಂ ರಾಜಾ ಕೂಡ ಸ್ಪರ್ಧಿಸಿದರು, ಆದರೆ ಈ ಚುನಾವನೆಯಲ್ಲಿ ಆಕಾಶ್ ಸಕ್ಸೇನಾ ಜಯಭೇರಿ ಸಾಧಿಸಿದರು. ಅಜಂ ಖಾನ್ ಅವರ ಆಪ್ತ ಸಹಾಯಕ ಎಸ್‌ಪಿ ಅಭ್ಯರ್ಥಿ ಅಸಿಂ ರಾಜಾ ಸೋತರು. ಈಗಾಗಲೇ ಅಜಂ ಖಾನ್ ಮೇಲೆ ಅನೇಕ ಪ್ರಕರಣಗಳಿದ್ದು, ಅದರ ವಿಚಾರಣೆ ಕೋರ್ಟ್​ನಲ್ಲಿ ನಡೆಯುತ್ತಿದೆ.

andolanait

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

6 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

7 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

8 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

8 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

11 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

12 hours ago