ಹಾವೇರಿ: ಸಾರ್ವತ್ರಿಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಅಕ್ರಮವಾಗಿ ಮತ್ತು ದಾಖಲೆಗಳಿಲ್ಲದೆ ಸಾಗಣೆ ಮಾಡುತ್ತಿದ್ದ 1.52 ಕೋಟಿ ಮೌಲ್ಯದ ಸಾಮಗ್ರಿ ಮತ್ತು ನಗದನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ರಘುನಂದನಮೂರ್ತಿ ಮತ್ತು ಜಿಲ್ಲಾ ಪಂಚಾಯಿತಿ ಸಿಇಒ ಅಕ್ಷಯ ಶ್ರೀಧರ ತಿಳಿಸಿದರು.
ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಮಾದರಿ ನೀತಿ ಸಂಹಿತೆ ಜಾರಿ ಪೂರ್ವದಲ್ಲಿ (ಮಾರ್ಚ್ 15ರಿಂದ 29ರವರೆಗೆ) ನಗದು ಹಾಗೂ ವಸ್ತು ಸೇರಿದಂತೆ 61.74 ಲಕ್ಷ ಮೊತ್ತದ ಸಾಮಗ್ರಿ ಹಾಗೂ ನೀತಿ ಸಂಹಿತೆ ಜಾರಿಗೊಂಡ ನಂತರ (ಮಾರ್ಚ್ 29ರಿಂದ ಏಪ್ರಿಲ್ 14ರವರೆಗೆ) 90.87 ಲಕ್ಷ ಮೊತ್ತದ ಸಾಮಗ್ರಿ ಮತ್ತು ನಗದನ್ನು ವಶಪಡಿಸಿಕೊಳ್ಳಲಾಗಿದೆ ಎಂದರು.
ಅಬಕಾರಿ ಇಲಾಖೆಯಿಂದ ನೀತಿ ಸಂಹಿತೆ ಪೂರ್ವದಲ್ಲಿ ₹2.32 ಲಕ್ಷ ಮೊತ್ತದ 573 ಲೀಟರ್ ಹಾಗೂ ಚುನಾವಣೆ ನೀತಿ ಸಂಹಿತೆ ಜಾರಿ ನಂತರ 14,33,297 ಮೊತ್ತದ 3,258 ಲೀಟರ್ ಮದ್ಯ ವಶಪಡಿಸಿಕೊಳ್ಳಲಾಗಿದೆ. ಒಟ್ಟು 335 ಅಬಕಾರಿ ನಿಯಮ ಉಲ್ಲಂಘನೆ ಪ್ರಕರಣ ದಾಖಲಾಗಿವೆ. ಮಾದರಿ ನೀತಿ ಸಂಹಿತೆ ಉಲ್ಲಂಘನೆ ಸಂಬಂಧಿಸಿದ 16 ಪ್ರಕರಣಗಳು ದಾಖಲಾಗಿವೆ ಎಂದು ವಿವರಿಸಿದರು.
56 ವಾಹನಗಳ ಜಪ್ತಿ: ನೀತೆ ಸಂಹಿತೆ ಪೂರ್ವದಲ್ಲಿ 4,400 ಮೊತ್ತದ ಮಾದಕ ವಸ್ತುಗಳು, 28.05 ಲಕ್ಷ ಮೊತ್ತದ ಬಳಕೆ ವಸ್ತುಗಳು, 4.94 ಲಕ್ಷ ಮೊತ್ತದ ಅತ್ಯಮೂಲ್ಯ ವಸ್ತುಗಳು, 21.50 ಲಕ್ಷ ಮೊತ್ತದ 22 ವಿವಿಧ ನಮೂನೆ ವಾಹನಗಳು ಹಾಗೂ ನೀತಿ ಸಂಹಿತೆ ಜಾರಿ ನಂತರ 7.54 ಲಕ್ಷ ಮೊತ್ತದ ವಸ್ತುಗಳು, 22.31 ಲಕ್ಷ ಮೌಲ್ಯದ 34 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಈವರೆಗೆ ಒಟ್ಟಾರೆ ಈವರೆಗೆ 56 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.
ಸಾಮಾಜಿಕ ಜಾಲತಾಣಗಳ ಮೇಲೆ ಮೊಕದ್ದಮೆ: ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ ಹಾನಗಲ್ ಮತ್ತು ಹಿರೇಕೆರೂರಿನಲ್ಲಿ ಎರಡು ಮೊಕದ್ದಮೆಗಳನ್ನು ದಾಖಲಿಸಲಾಗಿದೆ ಎಂದು ಮಾದರಿ ನೀತಿ ಸಂಹಿತೆ ಹಾಗೂ ಸಾಮಾಜಿಕ ಜಾಲತಾಣಗಳ ಚುನಾವಣಾ ನೋಡಲ್ ಅಧಿಕಾರಿ ಅಕ್ಷಯ ಶ್ರೀಧರ ಹೇಳಿದರು.
ಹಿರೇಕೆರೂರಿನ ಸಾಮಾಜಿಕ ಜಾಲತಾಣದ ಮುಖ್ಯಸ್ಥರ ಮೇಲೆ ಐಪಿಸಿ 505 ರಡಿ ಹಾಗೂ ಹಾನಗಲ್ ಕ್ಷೇತ್ರದ ಸಾಮಾಜಿಕ ಜಾಲತಾಣದ ಮುಖ್ಯಸ್ಥರ ಮೇಲೆ 171 ಜಿ ಅಡಿ ಮೊಕದ್ದಮೆ ದಾಖಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಯಾವುದೇ ಜಾಹೀರಾತಿಗೆ ಪೂರ್ವಾನುಮತಿ ಅಗತ್ಯವಾಗಿದೆ. ಚುನಾವಣಾ ಜಾಹೀರಾತು, ವಿಡಿಯೊಗಳ ಮೇಲೆ ತೀವ್ರ ನಿಗಾವಹಿಸಲಾಗಿದೆ ಎಂದು ತಿಳಿಸಿದರು.
ಬೆಳಗಾವಿ: ರಾಜಧಾನಿ ಬೆಂಗಳೂರನ್ನು ಹೊರತುಪಡಿಸಿದರೆ ಅತಿವೇಗವಾಗಿ ಬೆಳೆಯುತ್ತಿರುವ ಮೈಸೂರಿನಲ್ಲಿ ಸುಮಾರು 300 ಎಕರೆ ಜಮೀನಿನಲ್ಲಿ ಲೇಔಟ್ ನಿರ್ಮಾಣ ಮಾಡಿ ಸಾರ್ವಜನಿಕರಿಗೆ…
ಬೆಂಗಳೂರು: ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ರಾಜ್ಯ ಸರ್ಕಾರ ನೀಡಿದ್ದ ರಜೆ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಆದರೆ ಈ…
ಬೆಳಗಾವಿ: 532 ಎಕರೆ ಅರಣ್ಯ, ಸರ್ಕಾರಿ ಭೂಮಿ ಕಬಳಿಸಲು ನಕಲಿ ದಾಖಲೆ ಸಲ್ಲಿಸಿ ನ್ಯಾಯಾಲಯದಿಂದ ಆದೇಶ ಪಡೆದಿರುವ ವ್ಯಕ್ತಿಯ ಹಿಂದಿರುವವರ…
ರಾಕಿಂಗ್ ಸ್ಟಾರ್ ಯಶ್ ತಮ್ಮ ಬಹುನಿರೀಕ್ಷಿತ ಚಿತ್ರ ಟಾಕ್ಸಿಕ್‌ನ ಹೊಸ ಪೋಸ್ಟರ್ ಅನ್ನು ಬಿಡುಗಡೆ ಮಾಡುವ ಮೂಲಕ ಚಿತ್ರದ ಬಗ್ಗೆ…
ಮೈಸೂರು: ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನ ಜನಜಾಗೃತಿ ಆಂದೋಲನದ ರಥಯಾತ್ರೆಗೆ ಮೈಸೂರಿನಲ್ಲಿ ಇಂದು ಚಾಲನೆ ದೊರೆಯಿತು. ಮೈಸೂರು ನಗರದ ಜೆ.ಕೆ…
ಬೆಂಗಳೂರು: ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ವಿಚಾರ ಮತ್ತೊಮ್ಮೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್ ಶಾಸಕ ಕಾಶಪ್ಪನವರ್…