BREAKING NEWS

ಹಾವೇರಿ: 1.52 ಕೋಟಿ ಮೌಲ್ಯದ ಸಾಮಗ್ರಿ ವಶ

ಹಾವೇರಿ: ಸಾರ್ವತ್ರಿಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಅಕ್ರಮವಾಗಿ ಮತ್ತು ದಾಖಲೆಗಳಿಲ್ಲದೆ ಸಾಗಣೆ ಮಾಡುತ್ತಿದ್ದ 1.52 ಕೋಟಿ ಮೌಲ್ಯದ ಸಾಮಗ್ರಿ ಮತ್ತು ನಗದನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ರಘುನಂದನಮೂರ್ತಿ ಮತ್ತು ಜಿಲ್ಲಾ ಪಂಚಾಯಿತಿ ಸಿಇಒ ಅಕ್ಷಯ ಶ್ರೀಧರ ತಿಳಿಸಿದರು.

ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಮಾದರಿ ನೀತಿ ಸಂಹಿತೆ ಜಾರಿ ಪೂರ್ವದಲ್ಲಿ (ಮಾರ್ಚ್ 15ರಿಂದ 29ರವರೆಗೆ) ನಗದು ಹಾಗೂ ವಸ್ತು ಸೇರಿದಂತೆ 61.74 ಲಕ್ಷ ಮೊತ್ತದ ಸಾಮಗ್ರಿ ಹಾಗೂ ನೀತಿ ಸಂಹಿತೆ ಜಾರಿಗೊಂಡ ನಂತರ (ಮಾರ್ಚ್ 29ರಿಂದ ಏಪ್ರಿಲ್ 14ರವರೆಗೆ) 90.87 ಲಕ್ಷ ಮೊತ್ತದ ಸಾಮಗ್ರಿ ಮತ್ತು ನಗದನ್ನು ವಶಪಡಿಸಿಕೊಳ್ಳಲಾಗಿದೆ ಎಂದರು.

ಅಬಕಾರಿ ಇಲಾಖೆಯಿಂದ ನೀತಿ ಸಂಹಿತೆ ಪೂರ್ವದಲ್ಲಿ ₹2.32 ಲಕ್ಷ ಮೊತ್ತದ 573 ಲೀಟರ್ ಹಾಗೂ ಚುನಾವಣೆ ನೀತಿ ಸಂಹಿತೆ ಜಾರಿ ನಂತರ 14,33,297 ಮೊತ್ತದ 3,258 ಲೀಟರ್ ಮದ್ಯ ವಶಪಡಿಸಿಕೊಳ್ಳಲಾಗಿದೆ. ಒಟ್ಟು 335 ಅಬಕಾರಿ ನಿಯಮ ಉಲ್ಲಂಘನೆ ಪ್ರಕರಣ ದಾಖಲಾಗಿವೆ. ಮಾದರಿ ನೀತಿ ಸಂಹಿತೆ ಉಲ್ಲಂಘನೆ ಸಂಬಂಧಿಸಿದ 16 ಪ್ರಕರಣಗಳು ದಾಖಲಾಗಿವೆ ಎಂದು ವಿವರಿಸಿದರು.

56 ವಾಹನಗಳ ಜಪ್ತಿ: ನೀತೆ ಸಂಹಿತೆ ಪೂರ್ವದಲ್ಲಿ 4,400 ಮೊತ್ತದ ಮಾದಕ ವಸ್ತುಗಳು, 28.05 ಲಕ್ಷ ಮೊತ್ತದ ಬಳಕೆ ವಸ್ತುಗಳು, 4.94 ಲಕ್ಷ ಮೊತ್ತದ ಅತ್ಯಮೂಲ್ಯ ವಸ್ತುಗಳು, 21.50 ಲಕ್ಷ ಮೊತ್ತದ 22 ವಿವಿಧ ನಮೂನೆ ವಾಹನಗಳು ಹಾಗೂ ನೀತಿ ಸಂಹಿತೆ ಜಾರಿ ನಂತರ 7.54 ಲಕ್ಷ ಮೊತ್ತದ ವಸ್ತುಗಳು, 22.31 ಲಕ್ಷ ಮೌಲ್ಯದ 34 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಈವರೆಗೆ ಒಟ್ಟಾರೆ ಈವರೆಗೆ 56 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

ಸಾಮಾಜಿಕ ಜಾಲತಾಣಗಳ ಮೇಲೆ ಮೊಕದ್ದಮೆ: ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ ಹಾನಗಲ್ ಮತ್ತು ಹಿರೇಕೆರೂರಿನಲ್ಲಿ ಎರಡು ಮೊಕದ್ದಮೆಗಳನ್ನು ದಾಖಲಿಸಲಾಗಿದೆ ಎಂದು ಮಾದರಿ ನೀತಿ ಸಂಹಿತೆ ಹಾಗೂ ಸಾಮಾಜಿಕ ಜಾಲತಾಣಗಳ ಚುನಾವಣಾ ನೋಡಲ್ ಅಧಿಕಾರಿ ಅಕ್ಷಯ ಶ್ರೀಧರ ಹೇಳಿದರು.

ಹಿರೇಕೆರೂರಿನ ಸಾಮಾಜಿಕ ಜಾಲತಾಣದ ಮುಖ್ಯಸ್ಥರ ಮೇಲೆ ಐಪಿಸಿ 505 ರಡಿ ಹಾಗೂ ಹಾನಗಲ್ ಕ್ಷೇತ್ರದ ಸಾಮಾಜಿಕ ಜಾಲತಾಣದ ಮುಖ್ಯಸ್ಥರ ಮೇಲೆ 171 ಜಿ ಅಡಿ ಮೊಕದ್ದಮೆ ದಾಖಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಯಾವುದೇ ಜಾಹೀರಾತಿಗೆ ಪೂರ್ವಾನುಮತಿ ಅಗತ್ಯವಾಗಿದೆ. ಚುನಾವಣಾ ಜಾಹೀರಾತು, ವಿಡಿಯೊಗಳ ಮೇಲೆ ತೀವ್ರ ನಿಗಾವಹಿಸಲಾಗಿದೆ ಎಂದು ತಿಳಿಸಿದರು.

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

7 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

10 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

10 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

10 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

11 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

11 hours ago