ದೊಡ್ಡಗೌಡರೂ ನಮ್ಮ ಕೃಷಿ ಕಾಯ್ದೆಗಳನ್ನು ಬೆಂಬಲಿಸಿದ್ದಾರೆ: ರಾಜ್ಯಸಭೆಯಲ್ಲಿ ಮೋದಿ ಹೇಳಿಕೆ

ಹೊಸದಿಲ್ಲಿ: ಎಚ್‌.ಡಿ.ದೇವೇಗೌಡರು ನಮ್ಮ ಕೃಷಿ ಕಾಯ್ದೆಗಳನ್ನು ಬೆಂಬಲಿಸಿದ್ದಾರೆ. ಅವರಿಗೆ ಆಬಾರಿಯಾಗಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಸಭೆಯಲ್ಲಿ ಹೇಳಿದ್ದಾರೆ.

ಸದನದಲ್ಲಿ ಕೃಷಿಗೆ ಸಂಬಂಧಿಸಿದ ಚರ್ಚೆಗಳಲ್ಲಿ ಎಚ್.ಡಿ.ದೇವೇಗೌಡಜೀ ಕೊಡುಗೆಯನ್ನು ನಾನು ಪ್ರಶಂಸಿಸುತ್ತೇನೆ. ಅವರ ಮಾತುಗಳು ಚರ್ಚೆಗೆ ಉತ್ತಮ ದೃಷ್ಟಿಕೋನ ನೀಡಿವೆ. ಅವರು ಕೃಷಿ ಕ್ಷೇತ್ರದೊಂದಿಗೆ ಬಲವಾದ ನಂಟು ಹೊಂದಿದ್ದಾರೆ ಎಂದು ಮೋದಿ ಹೊಗಳಿದ್ದಾರೆ.

ದಿಲ್ಲಿಯಲ್ಲಿ ರೈತರ ಪ್ರತಿಭಟನೆ ಕುರಿತು ಮಾತನಾಡಿದ ಮೋದಿ ಅವರು, ನಾವು ಮಾತುಕತೆಗೆ ಸಿದ್ಧರಿದ್ದೇವೆ. ನಾನು ನಿಮ್ಮನ್ನು ಈ ಸದನದ ಮೂಲಕ ಆಹ್ವಾನಿಸುತ್ತಿದ್ದೇನೆ. ಕನಿಷ್ಠ ಬೆಂಬಲ ಇತ್ತು. ಇದೆ, ಇದ್ದೇ ಇರುತ್ತದೆ. ಯಾರೂ ತಪ್ಪು ಮಾಹಿತಿಯನ್ನು ಹರಡಬಾರದು ಎಂದು ಪ್ರತಿಕ್ರಿಯಿಸಿದ್ದಾರೆ.

× Chat with us