Mysore
16
overcast clouds

Social Media

ಭಾನುವಾರ, 21 ಡಿಸೆಂಬರ್ 2025
Light
Dark

ಮಂಡ್ಯ ಜನತೆಗೆ ಧನ್ಯವಾದ ಅರ್ಪಿಸಿದ ಎಚ್.ಡಿ ಕುಮಾರಸ್ವಾಮಿ

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಎಚ್.ಡಿ ಕುಮಾರಸ್ವಾಮಿ ಅವರು ಗೆಲುವಿನ ನಗೆ ಬೀರಿದ್ದಾರೆ. ಬರೋಬ್ಬರಿ 2,84,620 ಮತಗಳಿಂದ ಗೆಲುವಿನ ದಾಖಲೆ ಬರೆದಿದ್ದಾರೆ.

ಎಚ್.ಡಿ ಕುಮಾರಸ್ವಾಮಿ ಅವರು ತಮ್ಮ ಎಕ್ಸ್‌ ಖಾತೆಯಲ್ಲಿ ಟ್ವಿಟ್‌ ಮಾಡಿ ತಮ್ಮ ಗೆಲುವಿನ ಖುಷಿ ಹಂಚಿಕೊಂಡಿದ್ದು, ಮಂಡ್ಯ ಲೋಕಸಭೆ ಕ್ಷೇತ್ರದ ಮಹಾಜನತೆಗೆ ಶಿರ ಸಾಷ್ಟಾಂಗ ನಮನಗಳನ್ನು ತಿಳಿಸಿದ್ದಾರೆ.

ಈ ಗೆಲುವು ಸಕ್ಕರೆ ನಾಡಿನ ನನ್ನೆಲ್ಲಾ ತಂದೆ ತಾಯಂದಿರು, ಅಕ್ಕ ತಂಗಿಯರು, ಅಣ್ಣ ತಮ್ಮಂದಿರು ಹಾಗೂ ಜೆಡಿಎಸ್ – ಬಿಜೆಪಿ ಕಾರ್ಯಕರ್ತರು ಸೇರಿ ಸಮಸ್ತರಿಗೂ ಸಮರ್ಪಿತ. ಮೈತ್ರಿಕೂಟದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನನ್ನನ್ನು ಇಷ್ಟೊಂದು ಭಾರೀ ಅಂತರದಿಂದ ಗೆಲ್ಲಿಸಿದ ಎರಡೂ ಪಕ್ಷಗಳ ಎಲ್ಲಾ ನಾಯಕರು, ಕಾರ್ಯಕರ್ತರಿಗೆ ಈ ಯಶಸ್ಸು ಸಲ್ಲುತ್ತದೆ. ಸಂಘಟಿತ ಹೋರಾಟದಿಂದ ಈ ವಿಜಯ ಸಾಧ್ಯವಾಗಿದೆ ಎಂದು ವಿನಮ್ರವಾಗಿ ಹೇಳಬಯಸುತ್ತೇನೆ.

ಪ್ರತಿಯೊಬ್ಬರಿಗೂ ನನ್ನ ಕೃತಜ್ಞತಾಪೂರ್ವಕ ಧನ್ಯವಾದಗಳು. ಮಂಡ್ಯ ಲೋಕಸಭೆ ಕ್ಷೇತ್ರದ ಸೇವೆಗೆ ನನ್ನ ಜೀವನ ಮುಡಿಪು ಎಂದು ಬರೆದುಕೊಂಡಿದ್ದಾರೆ.

Tags:
error: Content is protected !!