ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಚ್.ಡಿ ಕುಮಾರಸ್ವಾಮಿ ಅವರು ಗೆಲುವಿನ ನಗೆ ಬೀರಿದ್ದಾರೆ. ಬರೋಬ್ಬರಿ 2,84,620 ಮತಗಳಿಂದ ಗೆಲುವಿನ ದಾಖಲೆ ಬರೆದಿದ್ದಾರೆ.
ಎಚ್.ಡಿ ಕುಮಾರಸ್ವಾಮಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಟ್ವಿಟ್ ಮಾಡಿ ತಮ್ಮ ಗೆಲುವಿನ ಖುಷಿ ಹಂಚಿಕೊಂಡಿದ್ದು, ಮಂಡ್ಯ ಲೋಕಸಭೆ ಕ್ಷೇತ್ರದ ಮಹಾಜನತೆಗೆ ಶಿರ ಸಾಷ್ಟಾಂಗ ನಮನಗಳನ್ನು ತಿಳಿಸಿದ್ದಾರೆ.
ಈ ಗೆಲುವು ಸಕ್ಕರೆ ನಾಡಿನ ನನ್ನೆಲ್ಲಾ ತಂದೆ ತಾಯಂದಿರು, ಅಕ್ಕ ತಂಗಿಯರು, ಅಣ್ಣ ತಮ್ಮಂದಿರು ಹಾಗೂ ಜೆಡಿಎಸ್ – ಬಿಜೆಪಿ ಕಾರ್ಯಕರ್ತರು ಸೇರಿ ಸಮಸ್ತರಿಗೂ ಸಮರ್ಪಿತ. ಮೈತ್ರಿಕೂಟದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನನ್ನನ್ನು ಇಷ್ಟೊಂದು ಭಾರೀ ಅಂತರದಿಂದ ಗೆಲ್ಲಿಸಿದ ಎರಡೂ ಪಕ್ಷಗಳ ಎಲ್ಲಾ ನಾಯಕರು, ಕಾರ್ಯಕರ್ತರಿಗೆ ಈ ಯಶಸ್ಸು ಸಲ್ಲುತ್ತದೆ. ಸಂಘಟಿತ ಹೋರಾಟದಿಂದ ಈ ವಿಜಯ ಸಾಧ್ಯವಾಗಿದೆ ಎಂದು ವಿನಮ್ರವಾಗಿ ಹೇಳಬಯಸುತ್ತೇನೆ.
ಪ್ರತಿಯೊಬ್ಬರಿಗೂ ನನ್ನ ಕೃತಜ್ಞತಾಪೂರ್ವಕ ಧನ್ಯವಾದಗಳು. ಮಂಡ್ಯ ಲೋಕಸಭೆ ಕ್ಷೇತ್ರದ ಸೇವೆಗೆ ನನ್ನ ಜೀವನ ಮುಡಿಪು ಎಂದು ಬರೆದುಕೊಂಡಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…