Mysore
30
light rain

Social Media

ಗುರುವಾರ, 03 ಅಕ್ಟೋಬರ್ 2024
Light
Dark

ಎಚ್‌ಡಿಎಫ್‌ಸಿ ಬ್ಯಾಂಕ್‌ ಲಾಭ ಶೇ 20ರಷ್ಟು ಹೆಚ್ಚಳ

ಮುಂಬೈ : ಎಚ್‌ಡಿಎಫ್‌ಸಿ ಬ್ಯಾಂಕ್‌ 2022–23ನೇ ಹಣಕಾಸು ವರ್ಷದ ಮಾರ್ಚ್‌ ತ್ರೈಮಾಸಿಕದಲ್ಲಿ ₹12,594 ಕೋಟಿ ನಿವ್ವಳ ಲಾಭ ಗಳಿಸಿದೆ. ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ ₹10,443 ಕೋಟಿ ನಿವ್ವಳ ಲಾಭ ಗಳಿಸಿತ್ತು. ಇದಕ್ಕೆ ಹೋಲಿಸಿದರೆ ಈ ಬಾರಿ ಲಾಭವು ಶೇ 20.60ರಷ್ಟು ಹೆಚ್ಚಾಗಿದೆ.
ಬ್ಯಾಂಕ್‌ನ ಒಟ್ಟು ವರಮಾನ ₹41,086 ಕೋಟಿಯಿಂದ ₹53,850 ಕೋಟಿಗೆ ಏರಿಕೆ ಆಗಿದೆ. 2022–23ನೇ ಹಣಕಾಸು ವರ್ಷದಲ್ಲಿ ನಿವ್ವಳ ಲಾಭ ₹45,997 ಕೋಟಿ ಆಗಿದೆ. 2021–22ರಲ್ಲಿ ₹38,052 ಕೋಟಿಯಷ್ಟು ನಿವ್ವಳ ಲಾಭ ಗಳಿಸಿತ್ತು. ವಸೂಲಾಗದ ಸಾಲದ ಸರಾಸರಿ ಪ್ರಮಾಣವು ಶೇ 1.7 ರಿಂದ ಶೇ 1.12ಕ್ಕೆ ಇಳಿಕೆ ಕಂಡಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ