BREAKING NEWS

ಅವನೊಬ್ಬ ಮೋಸಗಾರ : ಚಾಮುಂಡೇಶ್ವರಿ ಕೈ ಅಭ್ಯರ್ಥಿ ಮಾವಿನಹಳ್ಳಿ ಸಿದ್ದೇಗೌಡ ವಿರುದ್ಧ ಸಿದ್ದು ಕಿಡಿ

ಮೈಸೂರು : ಚಾಮುಂಡೇಶ್ವರಿ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಮಾವಿನಹಳ್ಳಿ ಸಿದ್ದೇಗೌಡ ವಿರುದ್ಧ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ ಪ್ರಸಂಗ ಬುಧವಾರ ನಡೆಯಿತು. ಅವನೊಬ್ಬ ಮೋಸಗಾರ. ಅವನು ಇಂಥವನು ಅಂತ ಗೊತ್ತಿದ್ದರೆ ನಮ್ಮ ಹುಡುಗನನ್ನೇ ನಿಲ್ಲಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಭ್ಯರ್ಥಿ ವರ್ತನೆ ಕುರಿತು ಬುಧವಾರ ಕಾಂಗ್ರೆಸ್‌ ಕಾರ್ಯಕರ್ತರು ತಮ್ಮ ಬಳಿ ಆಕ್ಷೇಪ ವ್ಯಕ್ತಪಡಿಸಿದಾಗ ಸಿದ್ದರಾಮಯ್ಯ ಕೂಡ ಸಿದ್ದೇಗೌಡ ವಿರುದ್ಧ ತಮ್ಮ ಅಸಮಾಧಾನ ಹೊರಹಾಕಿದರು. ಮಾವಿನಹಳ್ಳಿ ಸಿದ್ದೇಗೌಡ ಒಬ್ಬ ಮೋಸಗಾರ ಎಂದು ಕಿಡಿಕಾರಿದರು.

ಜೆಡಿಎಸ್‌ನವರಿಂದ ಬಿಜೆಪಿಗೆ ಬೆಂಬಲ : ವರುಣದಲ್ಲಿ ಜೆಡಿಎಸ್‌ನವರೆಲ್ಲ ಬಿಜೆಪಿಗೆ ಮತ ಹಾಕಿದ್ದಾರೆ. ಆದರೂ ನಾನು ಸುಲಭವಾಗಿ ಗೆಲುವು ದಾಖಲಿಸಲಿದ್ದೇನೆ. ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ನಡುವೆ ಅಷ್ಟೇ ಪೈಪೋಟಿ ಇದೆ. ಇಲ್ಲಿ ಬಿಜೆಪಿ ಎಲ್ಲೂ ನೇರವಾಗಿ ನಮ್ಮ ಜೊತೆ ಪೈಪೋಟಿಯಲ್ಲಿಲ್ಲ. ಸೋಮಣ್ಣ ಅವರಿಗೆ ವರುಣದ ಜನ ಯಾಕೆ ಮತ ಹಾಕಬೇಕು? ಕ್ಷೇತ್ರಕ್ಕೆ ಅವರ ಕೊಡುಗೆ ಏನು? ಅವರು ಜಾತಿ ಮುಂದಿಟ್ಟುಕೊಂಡು ಮತ ಕೇಳಿದ್ದಾರೆ. ಅದು ಬಿಟ್ಟರೆ ದುಡ್ಡಿನ ರಾಜಕೀಯ ಮಾಡಿದ್ದಾರೆ ಎಂದರು.

ನಮಗೆ ಬಹುಮತ ಬರೋದು ಖಚಿತವಾಗಿದೆ. ಬಹುತೇಕ ಎಲ್ಲಾ ಚುನಾವಣೋತ್ತರ ಸರ್ವೇಗಳೂ ಅದನ್ನೇ ಹೇಳುತ್ತಿದೆ. ನಾನು ಜನರ ನಾಡಿಮಿಡಿತ ಅರ್ಥಮಾಡಿಕೊಂಡಿರೋದು ಸರಿಯಿದೆ. ನಾನೇನು ಫಲಿತಾಂಶದ ನಿರೀಕ್ಷೆ ಮಾಡಿದ್ದೆನೋ ಅದೇ ಫಲಿತಾಂಶ ಬರಲಿದೆ. ಕರಾವಳಿ ಭಾಗದಲ್ಲಿ ಈ ಬಾರಿ ನಮ್ಮ ಸೀಟು ಹೆಚ್ಚಾಗಲಿದೆ ಅಂತ ತಿಳಿಸಿದ್ದಾರೆ.

ಭಜರಂಗದಳ ವಿಚಾರ ಒಂದು ವಿವಾದದ ವಿಚಾರವೇ ಅಲ್ಲ, ನಾವು ನಮ್ಮ ಪ್ರಣಾಳಿಕೆಯಲ್ಲಿ ಬಹಳ ಸ್ಪಷ್ಟವಾಗಿ ಹೇಳಿದ್ದೇವೆ. ಬಿಜೆಪಿಯವರು ಅದನ್ನು ಅಪಪ್ರಚಾರ ಮಾಡಿದ್ರು. ಲಿಂಗಾಯತ ನಾಯಕರೆಲ್ಲಾ ಭ್ರಷ್ಟಾಚಾರಿಗಳು ಅಂತ ನಾನೆಲ್ಲಿ ಹೇಳಿದ್ದೆ?, ನಾನು ಬಸವರಾಜ ಬೊಮ್ಮಾಯಿ ಭ್ರಷ್ಟಾಚಾರಿ ಅಂತ ಹೇಳಿದ್ದೆ, ನನ್ನ ಮಾತನ್ನು ತಿರುಚಿ ಅಪಪ್ರಚಾರ ಮಾಡಿದ್ರು ಎಂದು ಹೇಳಿದ್ದಾರೆ.

lokesh

Recent Posts

ವಿಧಾನಸೌಧಕ್ಕೆ ಮತ್ತೆ ಬರೋದು ಭಗವಂತನ ಇಚ್ಛೆ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಮರಳಿ ವಿಧಾನಸೌಧ ಪ್ರವೇಶ ಮಾಡುವ ಬಗ್ಗೆ ಜನರ ಆಶೀರ್ವಾದ ಮತ್ತು ಭಗವಂತನ ಇಚ್ಛೆ ನಿರ್ಧರಿಸುತ್ತದೆ ಎಂದು ಕೇಂದ್ರದ ಬೃಹತ್…

2 hours ago

ಜುಲೈ.3ರಿಂದ ವಾರ್ಷಿಕ ಅಮರನಾಥ ಯಾತ್ರೆ ಆರಂಭ

ಶ್ರೀನಗರ: ಹಿಂದೂಗಳ ಪವಿತ್ರ ಯಾತ್ರಾ ಸ್ಥಳವಾದ ಅಮರನಾಥ ಗುಹೆಗೆ ವಾರ್ಷಿಕ ತೀರ್ಥಯಾತ್ರೆ ಈ ವರ್ಷ ಜುಲೈ 3ರಂದು ಆರಂಭವಾಗಲಿದೆ. ಕೇಂದ್ರಾಡಳಿತ…

2 hours ago

ಪ್ರಧಾನಿ ಮೋದಿಗೆಂದೇ ಮೈಸೂರು ಮಹಾರಾಜರು ಧರಿಸುತ್ತಿದ್ದ ಮಾದರಿಯ ಪೇಟ ತಯಾರು

ಮೈಸೂರು: ಇದೇ ಏಪ್ರಿಲ್.15ರಂದು ನಾಗಮಂಗಲದ ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಠಕ್ಕೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ. ಅಂದು ಪ್ರಧಾನಿ ನರೇಂದ್ರ…

3 hours ago

ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಸ್‌ಗೆ ಬಿಗ್‌ ಟ್ವಿಸ್ಟ್‌

ಬೆಂಗಳೂರು: ಬಾಗಲಕೋಟೆ ಜಿಲ್ಲೆ ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯ ಮತ್ತು ಬ್ಲಾಕ್‌ಮೇಲ್‌ ಆರೋಪ…

3 hours ago

ಹೈಕಮಾಂಡ್‌ ಹೇಳಿದರೆ ಸಚಿವ ಸ್ಥಾನ ಬಿಡಲು ಸಿದ್ಧ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಹೈಕಮಾಂಡ್‌ ಹೇಳಿದರೆ ನಾನು ಸಚಿವ ಸ್ಥಾನ ಬಿಡಲು ಸಿದ್ಧನಿದ್ದೇನೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಹಿರಿಯ ಶಾಸಕರು…

4 hours ago

ರಾಜ್ಯದಲ್ಲಿ ಮುಂದಿನ 5 ದಿನ ತಾಪಮಾನ ಭಾರೀ ಏರಿಕೆ: ಹವಾಮಾನ ಇಲಾಖೆ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ಬಿಸಿಲ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮುಂದಿನ ಐದು ದಿನಗಳ ಕಾಲ ತಾಪಮಾನ ಗಣನೀಯವಾಗಿ ಏರಿಕೆಯಾಗಲಿದೆ…

5 hours ago