ಮೈಸೂರು : ಚಾಮುಂಡೇಶ್ವರಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಾವಿನಹಳ್ಳಿ ಸಿದ್ದೇಗೌಡ ವಿರುದ್ಧ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ ಪ್ರಸಂಗ ಬುಧವಾರ ನಡೆಯಿತು. ಅವನೊಬ್ಬ ಮೋಸಗಾರ. ಅವನು ಇಂಥವನು ಅಂತ ಗೊತ್ತಿದ್ದರೆ ನಮ್ಮ ಹುಡುಗನನ್ನೇ ನಿಲ್ಲಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅಭ್ಯರ್ಥಿ ವರ್ತನೆ ಕುರಿತು ಬುಧವಾರ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಬಳಿ ಆಕ್ಷೇಪ ವ್ಯಕ್ತಪಡಿಸಿದಾಗ ಸಿದ್ದರಾಮಯ್ಯ ಕೂಡ ಸಿದ್ದೇಗೌಡ ವಿರುದ್ಧ ತಮ್ಮ ಅಸಮಾಧಾನ ಹೊರಹಾಕಿದರು. ಮಾವಿನಹಳ್ಳಿ ಸಿದ್ದೇಗೌಡ ಒಬ್ಬ ಮೋಸಗಾರ ಎಂದು ಕಿಡಿಕಾರಿದರು.
ಜೆಡಿಎಸ್‌ನವರಿಂದ ಬಿಜೆಪಿಗೆ ಬೆಂಬಲ : ವರುಣದಲ್ಲಿ ಜೆಡಿಎಸ್‌ನವರೆಲ್ಲ ಬಿಜೆಪಿಗೆ ಮತ ಹಾಕಿದ್ದಾರೆ. ಆದರೂ ನಾನು ಸುಲಭವಾಗಿ ಗೆಲುವು ದಾಖಲಿಸಲಿದ್ದೇನೆ. ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಅಷ್ಟೇ ಪೈಪೋಟಿ ಇದೆ. ಇಲ್ಲಿ ಬಿಜೆಪಿ ಎಲ್ಲೂ ನೇರವಾಗಿ ನಮ್ಮ ಜೊತೆ ಪೈಪೋಟಿಯಲ್ಲಿಲ್ಲ. ಸೋಮಣ್ಣ ಅವರಿಗೆ ವರುಣದ ಜನ ಯಾಕೆ ಮತ ಹಾಕಬೇಕು? ಕ್ಷೇತ್ರಕ್ಕೆ ಅವರ ಕೊಡುಗೆ ಏನು? ಅವರು ಜಾತಿ ಮುಂದಿಟ್ಟುಕೊಂಡು ಮತ ಕೇಳಿದ್ದಾರೆ. ಅದು ಬಿಟ್ಟರೆ ದುಡ್ಡಿನ ರಾಜಕೀಯ ಮಾಡಿದ್ದಾರೆ ಎಂದರು.
ನಮಗೆ ಬಹುಮತ ಬರೋದು ಖಚಿತವಾಗಿದೆ. ಬಹುತೇಕ ಎಲ್ಲಾ ಚುನಾವಣೋತ್ತರ ಸರ್ವೇಗಳೂ ಅದನ್ನೇ ಹೇಳುತ್ತಿದೆ. ನಾನು ಜನರ ನಾಡಿಮಿಡಿತ ಅರ್ಥಮಾಡಿಕೊಂಡಿರೋದು ಸರಿಯಿದೆ. ನಾನೇನು ಫಲಿತಾಂಶದ ನಿರೀಕ್ಷೆ ಮಾಡಿದ್ದೆನೋ ಅದೇ ಫಲಿತಾಂಶ ಬರಲಿದೆ. ಕರಾವಳಿ ಭಾಗದಲ್ಲಿ ಈ ಬಾರಿ ನಮ್ಮ ಸೀಟು ಹೆಚ್ಚಾಗಲಿದೆ ಅಂತ ತಿಳಿಸಿದ್ದಾರೆ.
ಭಜರಂಗದಳ ವಿಚಾರ ಒಂದು ವಿವಾದದ ವಿಚಾರವೇ ಅಲ್ಲ, ನಾವು ನಮ್ಮ ಪ್ರಣಾಳಿಕೆಯಲ್ಲಿ ಬಹಳ ಸ್ಪಷ್ಟವಾಗಿ ಹೇಳಿದ್ದೇವೆ. ಬಿಜೆಪಿಯವರು ಅದನ್ನು ಅಪಪ್ರಚಾರ ಮಾಡಿದ್ರು. ಲಿಂಗಾಯತ ನಾಯಕರೆಲ್ಲಾ ಭ್ರಷ್ಟಾಚಾರಿಗಳು ಅಂತ ನಾನೆಲ್ಲಿ ಹೇಳಿದ್ದೆ?, ನಾನು ಬಸವರಾಜ ಬೊಮ್ಮಾಯಿ ಭ್ರಷ್ಟಾಚಾರಿ ಅಂತ ಹೇಳಿದ್ದೆ, ನನ್ನ ಮಾತನ್ನು ತಿರುಚಿ ಅಪಪ್ರಚಾರ ಮಾಡಿದ್ರು ಎಂದು ಹೇಳಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…