Mysore
17
clear sky

Social Media

ಭಾನುವಾರ, 14 ಡಿಸೆಂಬರ್ 2025
Light
Dark

ಬಸ್‌ ಹಾಗೂ ವ್ಯಾನ್‌ ನಡುವೆ ಮುಖಾಮುಖಿ ಡಿಕ್ಕಿ : ಒಂದೇ ಕುಟುಂಬದ 7 ಮಂದಿ ಸಾವು

ಜೈಪುರ : ಬಸ್‍ಗೆ ವ್ಯಾನ್ ಮುಖಾಮುಖಿ ಡಿಕ್ಕಿ ಹೊಡೆದು ಒಂದೇ ಕುಟುಂಬದ 7 ಮಂದಿ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ದಿಡ್ವಾನಾ-ಕುಚಮನ್ ಜಿಲ್ಲೆಯಲ್ಲಿ ನಡೆದಿದೆ.

ಖುಂಖುನಾ ಪೊಲೀಸ್ ಠಾಣಾ ವ್ಯಾಪ್ತಿಯ ಬಂಥಾಡಿ ಗ್ರಾಮದ ಬಳಿ ಈ ಘಟನೆ ನಡೆದಿದೆ ಎಂದು ಡಿಎಸ್ಪಿ ಧರಂಚಂದ್ ಬಿಷ್ಣೋಯ್ ಹೇಳಿದ್ದಾರೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು, ಬಂಗಾರ್ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಜೈಪುರಕ್ಕೆ ರವಾನಿಸಲಾಗಿದೆ ಎಂದು ಹೇಳಿದರು.

ಮೃತರೆಲ್ಲರೂ ವ್ಯಾನ್‍ನಲ್ಲಿ ಮದುವೆ ಸಮಾರಂಭದಲ್ಲಿ ಭಾಗವಹಿಸಲು ಸಿಕಾರ್ ನಿಂದ ನಾಗೌರ್ ಗೆ ಪ್ರಯಾಣಿಸುತ್ತಿದ್ದರು. ಅಪಘಾತಕ್ಕೆ ನಿಖರ ಕಾರಣವೇನೆಂದು ತಿಳಿದುಬಂದಿಲ್ಲ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!