ಹಲಗೂರು : ಹಲಗೂರು ಸಮೀಪದ ಎಚ್.ಬಸಾಪುರ ಗ್ರಾಮದ ಬಳಿ ಎರಡು ಬೈಕ್‌ಗಳ ನಡುವೆ ನಡೆದ ಡಿಕ್ಕಿಯಲ್ಲಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಶನಿವಾರ ಸಂಭವಿಸಿದೆ.
ಹಲಗೂರು ಸಮೀಪದ ಕುಲುಮೆದೊಡ್ಡಿ ಗ್ರಾಮದ ಜನತಾ ಕಾಲೋನಿ ನಿವಾಸಿ ರಾಚಯ್ಯ ಅವರ ಪುತ್ರ ನಿಂಗರಾಜು(33) ಮೃತ ವ್ಯಕ್ತಿ.
ಸ್ವಗ್ರಾಮದಿಂದ ಕನಕಪುರ ತಾಲ್ಲೂಕಿನ ಹಲಸೂರು ಗ್ರಾಮಕ್ಕೆ ತನ್ನ ಮಗುವನ್ನು ತಾಯಿ ಬಳಿ ಬಿಡಲು ಬೈಕ್‌ನಲ್ಲಿ ತೆರಳುತ್ತಿದ್ದರು. ಆಗ ಕನಕಪುರ ಕಡೆಯಿಂದ ವೇಗವಾಗಿ ಬಂದ ಬೈಕ್ ನಿಂಗರಾಜು ಅವರ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಮಗು ರಸ್ತೆ ಬದಿಗೆ ಬಿದ್ದಿದ್ದು, ಸಣ್ಣಪುಟ್ಡ ಗಾಯಗಳಾಗಿದ್ದು, ಪ್ರಾಣಪಾಯದಿಂದ ಪಾರಾಗಿದೆ. ನಿಂಗರಾಜು ರಸ್ತೆಗೆ ಬಿದ್ದಿದ್ದು, ಅದೇ ಮಾರ್ಗದಲ್ಲಿ ಸಾಗುತ್ತಿದ್ದ ಜೆಸಿಬಿ ನಿಂಗರಾಜು ದೇಹದ ಮೇಲೆ ಹರಿದ ಪರಿಣಾಮ ನಿಂಗರಾಜು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಡಿಕ್ಕಿ ಹೊಡೆದ ಬೈಕ್ ಸವಾರನಿಗೂ ಗಾಯಗಳಾಗಿದ್ದು, ಆಸ್ಪತ್ರೆಗೆ ಸಾಗಿಸಲಾಗಿದೆ.
ಈ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…
ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…
ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…
ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…
ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…
ಚಿಕ್ಕೋಡಿ : ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಯಾವುದೇ…