ಬೆಂಗಳೂರು : ಝೀಕಾ ವೈರಸ್‍ನಿಂದ ಪಾರಾಗಲು ಜನ ಕೆಲ ಗೈಡ್‍ಲೈನ್ಸ್‍ಗಳನ್ನು ಫಾಲೋ ಮಾಡುವಂತೆ ಆರೋಗ್ಯ ಇಲಾಖೆ ಮನವಿ ಮಾಡಿಕೊಂಡಿದೆ. ವೈರಸ್ ಬಗ್ಗೆ ಸ್ವಲ್ಪ ಯಾಮಾರಿದರೂ ಪ್ರಾಣಕ್ಕೆ ಸಂಚಕಾರ ಎದುರಾಗುವ ಸಾಧ್ಯತೆ ಇರುವುದರಿಂದ ಜನ ರೋಗ ಲಕ್ಷಣ ಕಂಡು ಬಂದ ಕೂಡಲೇ ಸಮೀಪದ ಆಸ್ಪತ್ರೆಗೆ ತೆರಳಿ ಪರೀಕ್ಷಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ.
ಕಣ್ಣು ಕೆಂಪಾಗುವಿಕೆ, ತಲೆ ನೋವು, ಜ್ವರ, ಕೀಲುಗಳಲ್ಲಿ ನೋವು, ಗಂಧೆಯೇಳುವುದು ಹಾಗೂ ಸ್ನಾಯುಗಳಲ್ಲಿ ನೋವು ಕಾಣಿಸಿಕೊಳ್ಳುವುದು ಸೋಂಕಿನ ಲಕ್ಷಣವಾಗಿದ್ದು, ಇಂತಹ ಲಕ್ಷಣಗಳು ಕಾಣಿಸಿಕೊಂಡವರು ತಕ್ಷಣ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯಬೇಕು ಎಂದು ತಿಳಿಸಲಾಗಿದೆ.
ಸೊಳ್ಳೆಗಳು ಸಾಮಾನ್ಯವಾಗಿ ಸಂತಾನೋತ್ಪತ್ತಿ ಮಾಡುವುದು ನಿಂತ ನೀರಲ್ಲಿ. ಹೀಗಾಗಿ ಮನೆಯ ಸುತ್ತಲೂ ನೀರು ನಿಲ್ಲದಂತೆ ಮುಂಜಾಗ್ರತೆ ವಹಿಸಬೇಕು. ಪ್ರತಿಯೊಬ್ಬ ವ್ಯಕ್ತಿಯೂ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡರೆ, ವೈರಸ್ ಹರಡುವ ಸಾಧ್ಯತೆ ಕಡಿಮೆಯಾಗುತ್ತೆ.
ರೋಗ ಲಕ್ಷಣಗಳು ಸೌಮ್ಯ ಹಾಗೂ ಸಾಧಾರಣ ಸ್ವರೂಪವಾಗಿದ್ದು, 2 ರಿಂದ 7 ದಿನಗಳವರೆಗೆ ಇರುತ್ತದೆ. ಗರ್ಭಿಣಿಯರು ವಿಶೇಷವಾಗಿ ಎಚ್ಚರಿಕೆ ವಹಿಸಬೇಕು. ರೋಗ ಲಕ್ಷಣಗಳಿಗೆ ಅನುಗುಣವಾಗಿ ಚಿಕಿತ್ಸೆ ನೀಡಲಾಗುತ್ತದೆ. ಯಾವುದೇ ರೋಗ ಲಕ್ಷಣಗಳು ಕಂಡುಬಂದಲ್ಲಿ ಹತ್ತಿರದ ಸರ್ಕಾರಿ ಆಸ್ಪತ್ರೆ ವೈದ್ಯರನ್ನು ಸಂಪರ್ಕ ಮಾಡಲು ಆರೋಗ್ಯ ಇಲಾಖೆ ಮನವಿ ಮಾಡಿಕೊಂಡಿದೆ.
65 ವಾರಗಳಿಗೆ ಸಾಕಾಗುವಷ್ಟು ಮೇವು ಸಂಗ್ರಹ; ಜಿಲ್ಲೆಯಾದ್ಯಂತ ಒಟ್ಟು 2,12,504 ಟನ್ ಮೇವು ಲಭ್ಯ - ನವೀನ್ ಡಿಸೋಜ ಮಡಿಕೇರಿ…
ಪುರುಷರೂ ಎಚ್‌ಪಿವಿ ಲಸಿಕೆ ಪಡೆಯುವುದು ಸುರಕ್ಷಿತ: ಡಾ.ಯೋಗೇಂದ್ರಕುಮಾರ್ ಸಲಹೆ • ಹೇಮಂತ್‌ಕುಮಾರ್ ಮಂಡ್ಯ : ಹೆಣ್ಣು ಮಕ್ಕಳನ್ನು ಬಾಧಿಸುತ್ತಿರುವ ಗರ್ಭಕಂಠ…
ತನಿಖೆ ವೇಳೆ ಮತ್ತಷ್ಟು ಕಳ್ಳತನ ಮಾಡಿದ ಪ್ರಕರಣಗಳು ಬೆಳಕಿಗೆ ವಿರಾಜಪೇಟೆ : ಕಾಫಿ ಕಣದಲ್ಲಿ ಒಣಗಿಸಲು ಇಟ್ಟಿದ ಕಾಳು ಮೆಣಸು…
ಮೈಸೂರು : ಪ್ರೀತಿ-ಪ್ರೇಮದ ಗುಂಗಲ್ಲಿ ಜೀವ ಕಳೆದುಕೊಂಡ ಜೀವಗಳು ಅದೆಷ್ಟೋ, ಜೀವನದಲ್ಲಿ ತೆಗೆದುಕೊಳ್ಳೋ ಒಂದೇ ಒಂದು ನಿರ್ಧಾರ ಬದುಕಿನ ಆಟವನ್ನೇ…
ನಗರಪಾಲಿಕೆಯಲ್ಲಿ 2026-27ನೇ ಸಾಲಿನ ಆಯವ್ಯಯ ಮಂಡನೆ ಮೈಸೂರು : ರಾಜಧಾನಿ ಬೆಂಗಳೂರು ನಂತರ ವೇಗವಾಗಿ ಬೆಳೆಯುತ್ತಿರುವ ಸಾಂಸ್ಕೃತಿಕ ನಗರಿಯ ಸಮಗ್ರ…
ಬೆಂಗಳೂರು : ರಾಜ್ಯದ ಎಲ್ಲ 224 ಮಂದಿ ಶಾಸಕರೂ ಮುಖ್ಯ ಮಂತ್ರಿಯಾಗಲು ಅರ್ಹರಿದ್ದಾರೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ…