Mysore
22
overcast clouds

Social Media

ಗುರುವಾರ, 13 ಆಗಸ್ಟ್ 2026
Light
Dark

ಭ್ರೂಣ ಹತ್ಯೆ: ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಆಸ್ಪತ್ರೆ ಸಿಬ್ಬಂದಿ

ಕಳೆದ ಕೆಲ ದಿನಗಳ ಹಿಂದಷ್ಟೇ ಮಂಡ್ಯ ಜಿಲ್ಲೆಯಲ್ಲಿ ನಡೆಯುತ್ತಿದ್ದ ಭ್ರೂಣ ಹತ್ಯೆ ಜಾಲ ಬೆಳಕಿಗೆ ಬಂದ ಬೆನ್ನಲ್ಲೇ ಅನುಮಾನಾಸ್ಪದ ಆಸ್ಪತ್ರೆಗಳ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳು ಕಣ್ಣಿಟ್ಟಿದ್ದು, ಇದೀಗ ಬೆಂಗಳೂರಿನ ಹೊಸಕೋಟೆಯ ತಿರುಮಲಶೆಟ್ಟಿಹಳ್ಳಿ ಕ್ರಾಸ್‌ ಬಳಿಯ ಎಸ್‌ಪಿಜಿ ಆಸ್ಪತ್ರೆಯಲ್ಲಿ ಭ್ರೂಣ ಹತ್ಯೆ ಆಗುತ್ತಿದ್ದುದು ಅಧಿಕಾರಿಗಳಿಗೆ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿದೆ.

ಕಳೆದ ಒಂದು ವಾರ ಈ ಆಸ್ಪತೆಯ ದಾಖಲೆಗಳನ್ನು ಪರಿಶೀಲಿಸಿದ್ದ ಅಧಿಕಾರಿಗಳು ಇಂದು ಮತ್ತೆ ಮರುಪರಿಶೀಲನೆಗೆಂದು ಬಂದಾಗ ಮಹಿಳೆಯೊಬ್ಬರು ಗರ್ಭಪಾತ ಮಾಡಿಸಿಕೊಂಡಿರುವಂತೆ ಕಂಡು ಬಂದಿದ್ದು ಅನುಮಾನ ಉಂಟಾಗಿದೆ. ಕೂಡಲೇ ಎಚ್ಚೆತ್ತುಕೊಂಡು ಪರಿಶೀಲನೆ ನಡೆಸಿದಾಗ ಐದು ತಿಂಗಳ ಗರ್ಭಿಣಿಯ ಭ್ರೂಣ ಹತ್ಯೆ ಮಾಡಿದ್ದಾಗಿ ತಿಳಿದುಬಂದಿದೆ. ಸ್ಥಳದಲ್ಲಿಯೇ 16 ವಾರಗಳ ಹೆಣ್ಣು ಭ್ರೂಣ ಪತ್ತೆಯಾಗಿದೆ. ಈ ಘಟನೆ ಸಂಭವಿಸಿದ ಕೂಡಲೇ ಆಸ್ಪತ್ರೆಯ ಮಾಲೀಕ ವೈದ್ಯ ಶ್ರೀನಿವಾಸ್‌ ಪರಾರಿಯಾಗಿದ್ದಾರೆ.

Disclaimer: ಭ್ರೂಣ ಹತ್ಯೆ ಕಾನೂನುಬಾಹಿರವಾಗಿದ್ದು, ಶಿಕ್ಷಾರ್ಹ ಅಪರಾಧವಾಗಿದೆ. ಭ್ರೂಣ ಹತ್ಯೆಗೆ ಸಹಕಾರ ನೀಡುವವರು ಹಾಗೂ ಭ್ರೂಣ ಹತ್ಯೆ ಮಾಡುವವರ ಬಗ್ಗೆ ಮಾಹಿತಿ ಸಿಕ್ಕರೆ ಕೂಡಲೇ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿ. 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!