ಕಳೆದ ಕೆಲ ದಿನಗಳ ಹಿಂದಷ್ಟೇ ಮಂಡ್ಯ ಜಿಲ್ಲೆಯಲ್ಲಿ ನಡೆಯುತ್ತಿದ್ದ ಭ್ರೂಣ ಹತ್ಯೆ ಜಾಲ ಬೆಳಕಿಗೆ ಬಂದ ಬೆನ್ನಲ್ಲೇ ಅನುಮಾನಾಸ್ಪದ ಆಸ್ಪತ್ರೆಗಳ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳು ಕಣ್ಣಿಟ್ಟಿದ್ದು, ಇದೀಗ ಬೆಂಗಳೂರಿನ ಹೊಸಕೋಟೆಯ ತಿರುಮಲಶೆಟ್ಟಿಹಳ್ಳಿ ಕ್ರಾಸ್ ಬಳಿಯ ಎಸ್‌ಪಿಜಿ ಆಸ್ಪತ್ರೆಯಲ್ಲಿ ಭ್ರೂಣ ಹತ್ಯೆ ಆಗುತ್ತಿದ್ದುದು ಅಧಿಕಾರಿಗಳಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿದೆ.
ಕಳೆದ ಒಂದು ವಾರ ಈ ಆಸ್ಪತೆಯ ದಾಖಲೆಗಳನ್ನು ಪರಿಶೀಲಿಸಿದ್ದ ಅಧಿಕಾರಿಗಳು ಇಂದು ಮತ್ತೆ ಮರುಪರಿಶೀಲನೆಗೆಂದು ಬಂದಾಗ ಮಹಿಳೆಯೊಬ್ಬರು ಗರ್ಭಪಾತ ಮಾಡಿಸಿಕೊಂಡಿರುವಂತೆ ಕಂಡು ಬಂದಿದ್ದು ಅನುಮಾನ ಉಂಟಾಗಿದೆ. ಕೂಡಲೇ ಎಚ್ಚೆತ್ತುಕೊಂಡು ಪರಿಶೀಲನೆ ನಡೆಸಿದಾಗ ಐದು ತಿಂಗಳ ಗರ್ಭಿಣಿಯ ಭ್ರೂಣ ಹತ್ಯೆ ಮಾಡಿದ್ದಾಗಿ ತಿಳಿದುಬಂದಿದೆ. ಸ್ಥಳದಲ್ಲಿಯೇ 16 ವಾರಗಳ ಹೆಣ್ಣು ಭ್ರೂಣ ಪತ್ತೆಯಾಗಿದೆ. ಈ ಘಟನೆ ಸಂಭವಿಸಿದ ಕೂಡಲೇ ಆಸ್ಪತ್ರೆಯ ಮಾಲೀಕ ವೈದ್ಯ ಶ್ರೀನಿವಾಸ್ ಪರಾರಿಯಾಗಿದ್ದಾರೆ.
Disclaimer: ಭ್ರೂಣ ಹತ್ಯೆ ಕಾನೂನುಬಾಹಿರವಾಗಿದ್ದು, ಶಿಕ್ಷಾರ್ಹ ಅಪರಾಧವಾಗಿದೆ. ಭ್ರೂಣ ಹತ್ಯೆಗೆ ಸಹಕಾರ ನೀಡುವವರು ಹಾಗೂ ಭ್ರೂಣ ಹತ್ಯೆ ಮಾಡುವವರ ಬಗ್ಗೆ ಮಾಹಿತಿ ಸಿಕ್ಕರೆ ಕೂಡಲೇ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿ.
ಮೈಸೂರು: ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿರುತ್ತಾರೆ ಎಂದು ಎಂಎಲ್‌ಸಿ ಹಾಗೂ ಮಾಜಿ ಸಚಿವ ಕೆ.ಎನ್.ರಾಜಣ್ಣ ಪುತ್ರ ರಾಜೇಂದ್ರ ಹೇಳಿದ್ದಾರೆ.…
ಮಂಗಳೂರು: ಧರ್ಮಸ್ಥಳ ಬುರುಡೆ ರಹಸ್ಯ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆ ನಡೆದಿದ್ದು, ಬಂಗ್ಲೆಗುಡ್ಡದಲ್ಲಿ ಸಿಕ್ಕ 7 ಅಸ್ಥಿಪಂಜರಗಳನ್ನು ಎಫ್‌ಎಸ್‌ಎಲ್‌ಗೆ ರವಾನೆ ಮಾಡಲಾಗಿದೆ.…
ನವದೆಹಲಿ: ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ ನಿತಿನ್ ನಬಿನ್ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗಳತ್ತ ಗಮನಹರಿಸಿದ್ದಾರೆ.…
ಕೇಪ್ ಕೆನವೆರೆಲ್: ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ 9 ತಿಂಗಳ ಕಾಲ ಸುದೀರ್ಘ ಕಾಲದ ಅನುಭವ ಹೊಂದಿರುವ ಸುನಿತಾ ವಿಲಿಯಮ್ಸ್ ನಿವೃತ್ತರಾಗಿದ್ದಾರೆ.…
ಮಹಾದೇಶ್ ಎಂ ಗೌಡ ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…
ರಾಮನಗರ: ತೆಂಗಿನ ಮರ ಹತ್ತಿ ಕೆಳಗೆ ಬಿದ್ದ ಸ್ನೇಹಿತನನ್ನು ಕೆರೆಯಲ್ಲಿ ಮುಳುಗಿಸಿ ಹತ್ಯೆ ಮಾಡಿದ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ…