Mysore
21
overcast clouds

Social Media

ಭಾನುವಾರ, 16 ಆಗಸ್ಟ್ 2026
Light
Dark

ಓಮಿಕ್ರಾನ್ ಹೊಸ ತಳಿ ಬಗ್ಗೆ ಆತಂಕ ಬೇಡ, ಅಗತ್ಯ ಮುನ್ನೆಚರಿಕೆ ಕ್ರಮ ವಹಿಸಿದೆ: ಸಚಿವ ಸುಧಾಕರ್

ಮೈಸೂರು : ಕೊರೊನಾ ವೈರಸ್ ಓಮಿಕ್ರಾನ್‌ನ ಹೊಸ ಉಪ ರೂಪಾಂತರ ತಳಿಗಳು ಪತ್ತೆಯಾಗುತ್ತಿದ್ದು, ರಾಜ್ಯದ ಜನ ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ. ಓಮಿಕ್ರಾನ್ ಹೊಸ ರೂಪಾಂತರಿ ತಳಿ ವಿಚಾರದಲ್ಲಿ ಸದ್ಯಕ್ಕೆ ರಾಜ್ಯಕ್ಕೆ ಯಾವುದೇ ಆತಂಕವಿಲ್ಲ, ಆದರೂ ಅಗತ್ಯ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ಸಚಿವ ಸುಧಾಕರ್ ಹೇಳಿದ್ದಾರೆ.

ಮಾಸ್ಕ್ ಕಡ್ಡಾಯದ ಬಗ್ಗೆ ಇನ್ನೂ ಯಾವುದೇ ನಿರ್ಧಾರವಾಗಿಲ್ಲ, ಮಹಾರಾಷ್ಟ್ರದಲ್ಲಿ ಓಮಿಕ್ರಾನ್ ಹೊಸ ರೂಪಾಂತರಿ ತಳಿಯ ಒಂದು ಪ್ರಕರಣ ಪತ್ತೆಯಾಗಿದ್ದು, ಅಮೆರಿಕಾದಲ್ಲಿ ಈ ಪ್ರಕರಣ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಗಡಿ ಜಿಲ್ಲೆಗಳಿಗೆ ಮಾರ್ಗಸೂಚಿ ನೀಡುವುದರ ಜೊತೆಗೆ  ಕಟ್ಟೆಚ್ಚರ ವಹಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ‌ನೀಡಲಾಗಿದೆ ಎಂದು ವಿವರಿಸಿದರು.

 

 

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!