ಮೈಸೂರು : ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕನಿಗೆ ಬಸ್ನಲ್ಲೇ ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲೂಕಿನ ವೀರದೇವನಪುರ ಗ್ರಾಮದಲ್ಲಿ ನಡೆದಿದೆ.
ಚುಂಚನಹಳ್ಳಿ ಗ್ರಾಮದ ಸುರೇಶ್ (50) ಹೃದಯಾಘಾತದಿಂದ ಸಾವನ್ನಪ್ಪಿರುವ ವ್ಯಕ್ತಿ. ಇವರು ನಂಜನಗೂಡಿನಿಂದ ಚುಂಚನಹಳ್ಳಿ ಗ್ರಾಮಕ್ಕೆ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಹೃದಯಾಘಾತವಾಗಿ ಕುಳಿತ ಸೀಟ್ನಲ್ಲೇ ಮೃತಪಟ್ಟಿದ್ದಾರೆ. ಆದರೆ ಯಾವಾಗ ಹೃದಯಾಘಾತವಾಗಿದೆ ಎಂದು ತಿಳಿದಿಲ್ಲ. ಅಲ್ಲದೇ ಇದನ್ನು ಬಸ್ಸಿನಲ್ಲಿದ್ದ ಪ್ರಯಾಣಿಕರೂ ಕೂಡ ಗಮನಿಸಿಲ್ಲ.
ನಿಲ್ದಾಣ ಬಂದಾಗ ಕಂಡಕ್ಟರ್ ಪ್ರಯಾಣಿಕನ ಬಳಿಗೆ ಬಂದು ಮಾತನಾಡಿಸಿದ್ದಾರೆ. ಆದರೆ ಪ್ರಯಾಣಿಕನಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಈ ವೇಳೆ ಮೃತಪಟ್ಟಿರುವುದು ಗೊತ್ತಾದರೂ ಏನೋ ಆಗಿರಬಹುದು ಎಂದು ಅದೇ ಬಸ್ನಲ್ಲೇ ತಾಲೂಕಿನ ದೊಡ್ಡಕವಲಂದೆ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆಸ್ಪತ್ರೆಯ ವೈದ್ಯರು ಪರೀಕ್ಷಿಸಿ ಹೃದಯಾಘಾತದಿಂದ ಪ್ರಯಾಣಿಕ ಸಾವನ್ನಪ್ಪಿದ್ದಾನೆ ಎಂದು ಹೇಳಿದ್ದಾರೆ. ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ. ಕವಲಂದೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…