BREAKING NEWS

ಪರೀಕ್ಷೆ ಬರೆಯುವಾಗ ಹೃದಯಾಘಾತ : 9ನೇ ತರಗತಿ ವಿದ್ಯಾರ್ಥಿ ಸಾವು

ಬಾಗಲಕೋಟೆ : ಜಮಖಂಡಿ ತಾಲ್ಲೂಕಿನ ಹುಲ್ಯಾಳ ಗ್ರಾಮದ ಪ್ರೌಢ ಶಾಲೆಯಲ್ಲಿ ಪರೀಕ್ಷೆ ಬರೆಯುವ ವೇಳೆ ವಿದ್ಯಾರ್ಥಿಯೊಬ್ಬನಿಗೆ ಹೃದಯಾಘಾತ ಸಂಭವಿಸಿ‌ ಸಾವಿಗೀಡಾಗಿರುವ ಘಟನೆ ನಡೆದಿದೆ. ಜಮಖಂಡಿ ತಾಲ್ಲೂಕಿನ ಇನಾಂ ಹಂಚಿನಾಳ ಪುನರ್ವಸತಿ ಕೇಂದ್ರದ ನಿವಾಸಿಯಾದ ವಿದ್ಯಾರ್ಥಿ ರಾಹುಲ್ ವಿಠ್ಠಲ ಕೋಲಕಾರ (15) ಸಾವನ್ನಪ್ಪಿರುವ ದುರ್ದೈವಿ.

ರಾಹುಲ್ ವಿಠ್ಠಲ ಹುಲ್ಯಾಳ ಗ್ರಾಮದ ಶ್ರೀ ಗುರು ಶಂಭುಲಿಂಗೇಶ್ವರ ಮಾಧ್ಯಮಿಕ ಶಾಲೆಯಲ್ಲಿ 9ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ, ಶಾಲೆಯಲ್ಲಿ ಆತನಿಗೆ ಅರ್ಧ ವಾರ್ಷಿಕ ಪರೀಕ್ಷೆಯನ್ನು ಬರೆಯುವ ಸಮಯದಲ್ಲಿ ಎದೆ ನೋವು ಕಾಣಿಸಿಕೊಂಡಿದೆ. ಅಲ್ಲಿರುವ ಶಿಕ್ಷಕರು ವಿದ್ಯಾರ್ಥಿ ಪಾಲಕರಿಗೆ ಮಾಹಿತಿ ನೀಡಿದ್ದಾರೆ.

ವಿದ್ಯಾರ್ಥಿ ರಾಹುಲ್ ವಿಠ್ಠಲ ಕೋಲಕಾರನನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಮಖಂಡಿ ನಗರದ ಖಾಸಗಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲಿ ಸಾವನ್ನಪ್ಪಿದ್ದಾಗಿ ತಿಳಿದು ಬಂದಿದೆ. ಇನ್ನು ಸಾವಿಗೀಡಾಗಿರುವ ವಿದ್ಯಾರ್ಥಿಗೆ ಹೃದಯಸಂಬಂಧಿ ಕಾಯಿಲೆ ಇತ್ತು ಎಂದು ಹೇಳಲಾಗ್ತಿದೆ.

lokesh

Recent Posts

2028ಕ್ಕೂ ಡಿಕೆಶಿ ಸಿಎಂ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ: ಸತೀಶ್ ಜಾರಕಿಹೊಳಿ

ಮೈಸೂರು: 2028ರಲ್ಲೂ ಡಿ.ಕೆ. ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಲಿ. ಅವರ ನೇತೃತ್ವದಲ್ಲೇ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿ ಎಂದು ಸತೀಶ್…

1 hour ago

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

7 hours ago

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

7 hours ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

7 hours ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

7 hours ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

7 hours ago