ಆಂಧ್ರದಲ್ಲಿ ಭಾರೀ ಮಳೆ : 19 ಸಾವು, 100ಕ್ಕೂ ಹೆಚ್ಚು ಜನ ನಾಪತ್ತೆ

ಅಮರಾವತಿ : ಆಂಧ್ರಪ್ರದೇಶದಲ್ಲಿ ಶುಕ್ರವಾರ ಸುರಿದ ಭಾರೀ ಮಳೆಗೆ ವಿವಿಧೆಡೆ 19 ಜನ ಅಸುನೀಗಿದ್ದಾರೆ. ಅಲ್ಲದೇ 100ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ. ಕಣ್ಮರೆಯಾದವರಿಗಾಗಿ ಶೋಧ ಮುಂದುವರಿದಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವಿದೆ. ಈಗಾಗಲೇ ಎನ್‌ಡಿಆರ್‌ಎಫ್ ತಂಡಗಳು ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿವೆ.

ಭಾರೀ ಮಳೆಯಿಂದಾಗಿ ತಿರುಮಲ ತಿರುಪತಿಯ ವಿಶ್ವವಿಖ್ಯಾತ ಶ್ರೀವೆಂಕಟೇಶ್ವರ ದೇವಸ್ಥಾನದ ಹೊರ ಮತ್ತು ಒಳಭಾಗ ಜಲಾವೃತವಾಗಿದ್ದು, ಮುಂದಿನ ಆದೇಶದವರೆಗೆ ದೇಗುಲವನ್ನು ಬಂದ್ ಮಾಡಲಾಗಿದೆ.

ಕರ್ನಾಟಕ, ಆಂಧ್ರಪ್ರದೇಶ, ಕೇರಳ ಮತ್ತು ತಮಿಳುನಾಡಿನಲ್ಲಿ ಭಾರಿ ಮಳೆಯಾಗುತ್ತಿದೆ. ಇನ್ನು ಕೇರಳದಲ್ಲೂ ವರುಣಾರ್ಭಟ ಜೋರಾಗಿದೆ. ಪಂಪಾ ನದಿ ಸೇರಿ ಹಲವು ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಈ ಹಿನ್ನೆಲೆ ಶಬರಿಮಲೆಯ ಪ್ರಸಿದ್ಧ ಅಯ್ಯಪ್ಪ ದೇವಾಲಯಕ್ಕೆ ಶನಿವಾರದ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ.

× Chat with us