ಮೈಸೂರು, ಮಂಡ್ಯ ಸೇರಿ ಹಲವು ಜಿಲ್ಲೆಗಳಲ್ಲಿ ನ.9ರ ವರೆಗೆ ಭಾರೀ ಮಳೆಯ ಮುನ್ಸೂಚನೆ!

ಬೆಂಗಳೂರು: ಮೈಸೂರು, ಮಂಡ್ಯ, ಕೊಡಗು, ಚಾಮರಾಜನಗರ ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ನ.7ರಿಂದ 9ರ ವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮೈಸೂರು, ಮಂಡ್ಯ, ಕೊಡಗು, ಚಾಮರಾಜನಗರ, ಕೋಲಾರ ತುಮಕೂರು, ಶಿವಮೊಗ್ಗ, ರಾಮನಗರ, ಹಾಸನ, ಚಿಕ್ಕಮಗಳೂರು, ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳವರೆಗೆ ಗುಡುಗು, ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇರುವುದರಿಂದ ‘ಯೆಲ್ಲೊ ಅಲರ್ಟ್‌’ ಘೋಷಿಸಲಾಗಿದೆ.

× Chat with us