ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಮಳೆ ಮತ್ತು ಭೂ ಕುಸಿತದಿಂದಾಗಿ ಅಮರನಾಥ ಯಾತ್ರೆಯನ್ನು ಭಾನುವಾರವೂ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರತಿಕೂಲ ಹವಾಮಾನದ ದೃಷ್ಟಿಯಿಂದ ಇಂದು ಬೆಳಿಗ್ಗೆ ಜಮ್ಮುವಿನ ಭಗವತಿ ನಗರ ಯಾತ್ರಿ ನಿವಾಸದಿಂದ ಯಾವುದೇ ಹೊಸ ಬ್ಯಾಚ್ ಯಾತ್ರಿಗಳಿಗೆ ಅವಕಾಶ ನೀಡಲಾಗಿಲ್ಲ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಭಾರೀ ಮಳೆ ಮತ್ತು ಭೂ ಕುಸಿತದಿಂದಾಗಿ ಜಮ್ಮು ಮತ್ತು ಗುಹಾ ದೇಗುಲಕ್ಕೆ ಹೋಗುವ ಮಾರ್ಗದಲ್ಲಿ ಸಾವಿರಾರು ಯಾತ್ರಾರ್ಥಿಗಳು ವಿವಿಧ ಸ್ಥಳಗಳಲ್ಲಿ ಸಿಲುಕಿಕೊಂಡಿದ್ದಾರೆ.
ಎರಡೂ ಮಾರ್ಗಗಳಲ್ಲಿ ಯಾತ್ರಿಗಳಿಗೆ ಹೆಲಿಕಾಪ್ಟರ್ ಸೇವೆಗಳು ಲಭ್ಯವಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಗುರುವಾರ ರಾತ್ರಿಯಿಂದ ಜಮ್ಮು ಮತ್ತು ಕಾಶ್ಮೀರದ ಹೆಚ್ಚಿನ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಜಿತೇಂದ್ರ ಸಿಂಗ್ “ಯಾರೂ ಆತಂಕಕ್ಕೆ ಒಳಗಾಗಬೇಡಿ. ಹಿರಿಯ ಅಧಿಕಾರಿಗಳು ಪರಿಸ್ಥಿತಿ ಪರಿಶೀಲಿಸುತ್ತಿದ್ದಾರೆ’ ಎಂದಿದ್ದಾರೆ.
ಈ ವರ್ಷದ 62 ದಿನಗಳ ಸುದೀರ್ಘ ಅಮರನಾಥ ಯಾತ್ರೆಯು ಜುಲೈ 1 ರಂದು ಪ್ರಾರಂಭವಾಯಿತು ಮತ್ತು ಶ್ರಾವಣ ಪೂರ್ಣಿಮಾ ಹಬ್ಬದ ಜೊತೆಗೆ ಆಗಸ್ಟ್ 31 ರಂದು ಕೊನೆಗೊಳ್ಳಲಿದೆ.
ಬೆಂಗಳೂರು: ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ನೀಡಲಾಗಿದ್ದ ಜೀವಾವಧಿ ಶಿಕ್ಷೆಗೆ ತಡೆ…
ಮೈಸೂರು: ಜಿಲ್ಲೆಯ ಎಚ್.ಡಿ. ಕೋಟೆ ತಾಲೂಕಿನ ಕೋಹಳ ಬಳಿಯ ಮೈಸೂರು–ಮಾನಂದವಾಡಿ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕೆಎಸ್ಆರ್‌ಟಿಸಿ ಬಸ್…
ಜೆರುಸೇಲಂ: ಭೀಕರ ವಿಮಾನ ಅವಘಡವನ್ನು ತಪ್ಪಿಸಿ 174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರಿಗೆ…
ಮಂಡ್ಯ: ರಾಜ್ಯದ ಸಚಿವರಿಗೆ ಮುಜುಗರ ಉಂಟುಮಾಡಲು ಕೇಂದ್ರ ಸಚಿವರೊಬ್ಬರು ಹಾಗೂ ಕರ್ನಾಟಕದ ಬಿಜೆಪಿ ನಾಯಕರೊಬ್ಬರು ಸ್ಟಿಂಗ್ ಆಪರೇಷನ್‌ಗೆ ಸಂಚು ರೂಪಿಸಿದ್ದಾರೆ…
ಸಿದ್ದಾಪುರ: ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯ ಘಟ್ಟತಳ ಹೇರೂರು ಎಸ್ಟೇಟ್ ಬಳಿ ಗುರುವಾರ ರಾತ್ರಿ ಹುಲಿ ಕಾಣಿಸಿಕೊಂಡಿದ್ದು ಬಳಿಕ ಸಮೀಪದ…
ಒಂದು ಕಾಲದಲ್ಲಿ (ಒಂದಾನೊಂದು ಕಾಲದಲ್ಲಿ ಎಂಬ ಮಾತಿನಂತೆ) ಎಟಿಎಂ ಯಂತ್ರಗಳಿಂದ ಹಣ ಡ್ರಾ ಮಾಡಿದಾಗ ಸಾಮಾನ್ಯವಾಗಿ ಹೊಸ ಗರಿಗರಿನೋಟುಗಳು ಬರುತ್ತಿದ್ದವು.…