ನವದೆಹಲಿ : ಕಾರ್ಮಿಕರ ದಿನದಂದು ವಾಣಿಜ್ಯ ಬಳಕೆಯ 19 ಕೆಜಿ ತೂಕದ ಎಲ್‌ಪಿಜಿ ಸಿಲಿಂಡರ್ ಬೆಲೆ ಭಾರೀ ಇಳಿಕೆ ಕಂಡಿದ್ದು, 171. 50 ರೂ. ಕಡಿತಗೊಂಡಿದೆ. ಈ ಆದೇಶವು ಇಂದಿನಿಂದಲೇ ಜಾರಿಗೆ ಬರಲಿದೆ.
ಈ ಹಿಂದೆ ಏಪ್ರಿಲ್‌ನಲ್ಲಿ ಸರ್ಕಾರವು ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್‌ನ ಬೆಲೆಗಳನ್ನು 92 ರೂ. ಇಳಿಕೆ ಮಾಡಿತ್ತು. ಇದೀಗ ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು ಪರಿಷ್ಕರಿದ್ದು, ಪುನಃ ಇಳಿಕೆಯಾಗಿದೆ. ಆದರೆ ಗೃಹಬಳಕೆಯ ಎಲ್‍ಪಿಜಿ ಸಿಲಿಂಡರ್ ದರ ಪರಿಷ್ಕರಣೆಯಾಗಿಲ್ಲ. 14.2 ಕೆಜಿ ತೂಕದ ಗೃಹ ಬಳಕೆಯ ಗ್ಯಾಸ್ ಸಿಲಿಂಡರ್‌ಗಳ ದರ ಕಳೆದ ತಿಂಗಳಿನಂತೆಯೇ ಇದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 19 ಕೆ.ಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ 1856.50 ರೂ. ಆಗಿದೆ. ಈ ಹಿಂದೆ 2,028 ರೂ. ಇತ್ತು. ಅದೇ ರೀತಿ ಮುಂಬೈನಲ್ಲಿ ಈ ಮೊದಲು 1,980 ರೂ. ಇದ್ದು, ಇದೀಗ ಇದರ ಬೆಲೆ 1,808.50 ರೂ. ಆಗಿದೆ. ಚೆನ್ನೈನಲ್ಲಿ ವಾಣಿಜ್ಯ ಸಿಲಿಂಡರ್‌ನ ಬೆಲೆ ಈ ಮೊದಲು 2,192.50 ರೂ. ಇದ್ದು, ಇದೀಗ 2,021.50 ರೂ. ಆಗಿದೆ.
ಮಂಜು ಕೋಟೆ ಕುರುಬ ಸಮಾಜದ ಎರಡು ಬಣಗಳ ನಡುವೆ ಉಂಟಾಗಿದ್ದ ಗೊಂದಲ; ಸಿಎಂ ಸಿದ್ದರಾಮಯ್ಯ ಸೂಚನೆಯಂತೆ ಕ್ರಮ ಎಚ್.ಡಿ.ಕೋಟೆ: ಮುಖ್ಯಮಂತ್ರಿ…
೩೫ ಕಡೆಗಳಲ್ಲಿ ಹೈಬ್ರಿಡ್ ಸಿಗ್ನಲ್ ಲೈಟ್; ವಾಹನ ಸಂಚಾರ ದಟ್ಟಣೆ ನಿಯಂತ್ರಿಸಲು ಪೊಲೀಸ್ ಇಲಾಖೆ ಕ್ರಮ ಮೈಸೂರು: ಭವಿಷ್ಯದಲ್ಲಿ ರಿಂಗ್…
ಕಾಡಂಚಿನ ವ್ಯಾಘ್ರ ಸೆರೆಗೆ ಹಗಲು-ರಾತ್ರಿ ಕಾರ್ಯಾಚರಣೆ ಚಿರತೆ ಸೆರೆಗೆ ತಂತ್ರಜ್ಞಾನ ಬಳಕೆ ಮಾಡಿದ್ದ ಅರಣ್ಯ ಇಲಾS ಮೈಸೂರು: ಕಳೆದ ಎರಡು…
ಹೇಮಂತ್‌ಕುಮಾರ್ ದಾಖಲೆ ಸೃಷ್ಟಿ ; ಹಲವು ಅಚ್ಚರಿಗಳ ತಾಣವಾದ ಮೂರು ದಿನಗಳ ಮೇಳ ಮಂಡ್ಯ: ಮೂರು ದಿನಗಳ ಕಾಲ ವಿ.ಸಿ.ಫಾರಂನಲ್ಲಿ…
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…