ಚಿಕ್ಕಮಗಳೂರು : ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದ ಅವಧಿಯಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಸರ್ಕಾರ ಪೆಸಿಎಂ ಪೋಸ್ಟರ್ ಅಂಟಿಸಿ ಅಭಿಯಾನ ಮಾಡಿತ್ತು. ಇದೀಗ ಅದೇ ಮಾದರಿಯಲ್ಲಿ ಚಿಕ್ಕಮಗಳೂರಿನ ಬಿಜೆಪಿ ಕಾರ್ಯಕರ್ತರು ಜಿಲ್ಲೆಯಲ್ಲಿನ ಶಾಸಕರ ಕಚೇರಿ ಹಾಗೂ ಸರ್ಕಾರಿ ಕಚೇರಿಗಳಲ್ಲಿ, YST ಸಮಿತಿಯ ಸುತ್ತೋಲೆ. ಯಾವುದೇ ಸರ್ಕಾರಿ ಸಂಬಂಧಿತ ಸೇವೆಗಳಿಗಾಗಿ, ಹಲೋ ಅಪ್ಪ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ ಹಾಗೂ ಪೇಮೆಂಟ್ ಮಾಡಿ. ಎಂದು ಪೋಸ್ಟರ್ ಅಂಟಿಸಿದ್ದು ಅಂಟಿಸಿದ್ದು.
ಪೋಸ್ಟರ್ ನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಫೋಟೋ ಇದೆ. ಇದರಲ್ಲಿ ಸಿದ್ದರಾಮಯ್ಯ ಅವರನ್ನು ಶ್ಯಾಡೊ ಸಿಎಂ ಎಂದು ಕರೆಯಲಾಗಿದೆ.
ಈ ಮೂಲಕ ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ಪೋಸ್ಟರ್ ವಾರ್ ಶುರುವಾಗಿದೆ.
ಕಳೆದ ಕೆಲ ದಿನಗಳ ಹಿಂದೆ ಮೈಸೂರಿನ ಚಟ್ನಳ್ಳಿ ಪಾಳ್ಯ ಗ್ರಾಮದಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಜನರ ಅಹವಾಲು ಸ್ವೀಕರಿಸುವ ವೇಳೆ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರು ತಮ್ಮ ತಂದೆ ಸಿಎಂ ಸಿದ್ದರಾಮಯ್ಯ ಜೊತೆ ನಡೆಸಿರುವ ಫೋನ್ ಸಂಭಾಷಣೆ ರಾಜ್ಯ ರಾಜಕಾರಣದಲ್ಲಿ ಭಾರಿ ಸದ್ದು ಮಾಡಿತ್ತು.
ತಂದೆಯೋಟ್ಟಿಗೆ ಫೋನ್ ನಲ್ಲಿ ಮಾತನಾಡಿದ್ದ ಯತೀಂದ್ರ, ಆರಂಭದಲ್ಲಿ ಅಪ್ಪ ಹೇಳಿ ಎಂದು ಮಾತು ಶುರು ಮಾಡಿದ್ದರು. ಈ ವೇಳೆ ಸಿದ್ದರಾಮಯ್ಯನವರು ವಿವೇಕಾನಂದ ಯಾರು ಎಂದು ಪ್ರಶ್ನಿಸಿದ್ದರು. ಆಗ ಯತೀಂದ್ರ, ಮಹದೇವ್ ಅವರಿಗೆ ಫೋನ್ ನೀಡುವಂತೆ ತಮ್ಮ ತಂದೆಗೆ ಹೇಳಿದ್ದರು. ಅವರಿಗೆ ಫೋನ್ ಕೊಟ್ಟ ತಕ್ಷಣ ಅವರನ್ನು ತರಾಟೆಗೆ ತೆಗೆದುಕೊಂಡಿದ್ದ ಯತೀಂದ್ರ, ನಾನು ಕೊಟ್ಟಿದ್ದನ್ನು ಬಿಟ್ಟು ಬೇರೆ ಯಾವುದೆಂದು ಪ್ರಶ್ನಿಸಿದ್ದರು. ನನಗೆ ಗೊತ್ತಿಲ್ಲ ನಾನು ಕೊಟ್ಟಿರುವ ನಾಲ್ಕೈದು ಮಾತ್ರ ಮಾಡಿ ಎಂದು ಸೂಚನೆ ನೀಡಿದ್ದರು.
ವಿರೋಧಪಕ್ಷಗಳು ಇದನ್ನೇ ಅಸ್ತ್ರವಾಗಿ ಮಾಡಿಕೊಂಡಿದ್ದವು. ಇದೀಗ ಅದರ ಮುಂದುವರಿದ ಭಾಗವಾಗಿ ಪೋಸ್ಟರ್ ವಾರ್ ಆರಂಭವಾಗಿದೆ.
ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…
ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…
ಬೆಂಗಳೂರು : ನಗರದ ಹೊರವಲಯದ ಆನೇಕಲ್‌ನಲ್ಲಿ ಭಾನುವಾರ ಭೀಕರ ಸರಣಿ ಅಪಘಾತವಾಗಿದೆ. ವೇಗವಾಗಿ ನುಗ್ಗಿ ಬಂದ ಬೃಹತ್ ಕಂಟೈನರ್ ಲಾರಿಯೊಂದು…
ಮಂಡ್ಯ : ಮೌಢ್ಯಗಳನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು. ವಿದ್ಯಾವಂತರಲ್ಲಿ ಕಂದಾಚಾರ ಹಾಗೂ ಮೌಢ್ಯತೆ ಇರುವುದು…
ಮೈಸೂರು : ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಲಲಿತ ಕಲೆ ಮತ್ತು ಕರಕುಶಲ ಹಾಗೂ ಮಹಿಳಾ ಉದ್ದಿಮೆ ಉಪ…
ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜು, ಕಳೆದೆರಡು…