ದೆಹಲಿ : ಬಲವಂತದಿಂದ ಜನರ ಬಾಯಿ ಮುಚ್ಚಿಸುವುದು ಮತ್ತು ರಾಷ್ಟ್ರ ವಿರೋಧಿ ಎಂದು ಒಬ್ಬರನ್ನು ಬ್ರಾಂಡ್ ಮಾಡುವುದು ಅಪಾಯಕಾರಿಯಾದ ಬೆಳವಣಿಗೆಯಾಗಿದೆ. ಈ ಪ್ರವೃತ್ತಿ ನಮ್ಮ ಪ್ರಜಾಪ್ರಭುತ್ವವನ್ನು ಕೊನೆಗೊಳಿಸಿ ಸಂವಿಧಾನವನ್ನು ನಾಶಗೊಳಿಸುತ್ತದೆ. ನಾಯಕನ ಆರಾಧನೆ ಮತ್ತು ಭಕ್ತಿಯ ದುಷ್ಟರಿಣಾಮಗಳ ಕುರಿತು ಅಂಬೇಡ್ಕರ್ ಆಗಾಲೇ ಎಚ್ಚರಿಸಿದ್ದರು ಎಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಅಂಬೇಡ್ಕರ್ ಜಯಂತಿಯ ಪ್ರಯುಕ್ತ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮಹತ್ವದ ಕುರಿತು ಟ್ವೀಟರ್‌ನಲ್ಲಿ ಖರ್ಗೆ ವಿಡಿಯೊ ಸಂದೇಶ ನೀಡಿದ್ದಾರೆ. ಈ ವೇಳೆ ಆಡಳಿತ ಪಕ್ಷದ ನಡೆಯನ್ನು ತೀಕ್ಷ್ಮವಾಗಿ ಖಂಡಿಸಿದ್ದಾರೆ. ಸಂಸತ್ತನ್ನು ಚರ್ಚೆಗಿಂತ ಹೋರಾಟದ ಅಖಾಡವಾಗಿ ಆಡಳಿತ ಪಕ್ಷ ಬದಲಾಯಿಸಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.
‘ಧರ್ಮದ ಪ್ರಕಾರ ಭಕ್ತಿ ಮೋಕ್ಷದ ದಾರಿಯಾಗಿದೆ. ಆದರೆ, ರಾಜಕೀಯದಲ್ಲಿ ಭಕ್ತಿ ಅಥವಾ ನಾಯಕನ ಆರಾಧನೆ ದೇಶದ ಅವನತಿಗೆ ದಾರಿಯಾಗಲಿದೆ. ಅಂತಿಮವಾಗಿ ಸರ್ವಾಧಿಕಾರಕ್ಕೆ ದಾರಿ ಮಾಡಿಕೊಡಲಿದೆ‘ ಎಂದು ಅಂಬೇಡ್ಕರ್ ಹೇಳಿದ ಮಾತನ್ನು ಖರ್ಗೆ ಪುನರುಚ್ಛರಿಸಿದ್ದಾರೆ.
https://twitter.com/kharge/status/1646709273311981571?t=MC3foyaXTy-UU1ie4-6xUg&s=08
ಮಂಡ್ಯ: ರಾಜಕಾರಣಿಗಳನ್ನು ಹೆದರಿಸ ಬಲ್ಲಂತಹ ಶಕ್ತಿ ಸಾಹಿತ್ಯಕ್ಕಿದೆ. ಹಾಗಾಗಿ ರಾಜ ಕಾರಣಿಗಳು ಹಾದಿ ತಪ್ಪದಂತೆ ಸಾಹಿತಿಗಳು ಎಚ್ಚರಿಸಬೇಕು ಎಂದು ಕಾನೂನು…
ಮಂಡ್ಯ: ಪಾರ್ಸೆಲ್ ಕೊಡುವ ನೆಪದಲ್ಲಿ ಬಂದು ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯದ ಕ್ಯಾತನಹಳ್ಳಿ ಗ್ರಾಮದಲ್ಲಿ ನಡೆದಿದೆ. ರಮೇಶ್…
ಬೆಂಗಳೂರು: ನಿವೃತ್ತ ಸಾರಿಗೆ ನೌಕರರಿಗೆ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಗ್ರಾಚ್ಯುಟಿ ಹಣವನ್ನು ಬಿಡುಗಡೆ ಮಾಡಿದೆ. ಗ್ರಾಚ್ಯುಟಿ ಮತ್ತು ಗಳಿಕೆ…
ಬೆಂಗಳೂರು: ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ವೇದಿಕೆಯನ್ನು ಸಿಎಂ ಸಿದ್ದರಾಮಯ್ಯ ದುರುಪಯೋಗಪಡಿಸಿಕೊಂಡಿದ್ದಾರೆ…
ಹೈದರಾಬಾದ್: ಡಿಸೆಂಬರ್.4ರಂದು ಸಂಧ್ಯಾ ಥಿಯೇಟರ್ ಬಳಿ ನಡೆದ ಕಾಲ್ತುಳಿತದಲ್ಲಿ ಮಹಿಳೆಯೋರ್ವರು ಮೃತಪಟ್ಟಿದ್ದು ದುರದೃಷ್ಟಕರ ಎಂದು ನಟ ಅಲ್ಲು ಅರ್ಜುನ್ ಬೇಸರ…