BREAKING NEWS

ಸಂಚಾರ ಪೊಲೀಸರ ವಿರುದ್ಧ ಸಾರ್ವಜನಿಕ ಹಿತಾಸಕ್ತಿಯ ಕುಟುಕು ಕಾರ್ಯಾಚರಣೆಗೆ ಹೈಕೋರ್ಟ್ ಸಮ್ಮತಿ

ಬೆಂಗಳೂರು : ಸಾರ್ವಜನಿಕ ಹಿತಾಸಕ್ತಿಯ ಕುಟುಕು ಕಾರ್ಯಾಚರಣೆಗೆ ಹೈಕೋರ್ಟ್ ಸಮ್ಮತಿಸಿ, ಸಂಚಾರ ಪೊಲೀಸರ ವಿರುದ್ಧದ ಸ್ಟಿಂಗ್ ಆಪರೇಷನ್ ಎತ್ತಿಹಿಡಿದಿದೆ. ಜೊತೆಗೆ ಎನ್ ಬ್ರಾಡ್ ಕಾಸ್ಟಿಂಗ್ ಸ್ಟಾಂಡರ್ಡ್ ಅಥಾರಿಟಿ(ಬಿಎಸ್‍ಎ), ಕೇಬಲ್ ಟೆಲಿವಿಷನ್ ನೆಟ್ವರ್ಕ್ ಕಾಯಿದೆಯ ಕುಟುಕು ಕಾರ್ಯಾಚರಣೆಗಳು ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಆದೇಶಿಸಿತು.

ಅಧೀನ ನ್ಯಾಯಾಲಯದಲ್ಲಿ ತಮ್ಮ ವಿರುದ್ಧದ ಪ್ರಕರಣ ರದ್ದುಗೊಳಿಸುವಂತೆ ಬೆಂಗಳೂರಿನ ಈಶಾನ್ಯ ವಲಯದ ಸಂಚಾರ ವಿಭಾಗದ ಎಸಿಪಿ ಎಂ.ಎಸ್.ಅಶೋಕ್ ಮತ್ತಿತರ ಹಲವು ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಈ ಆದೇಶ ನೀಡಿದೆ.

ಕುಟುಕು ಕಾರ್ಯಚರಣೆ ಮಾಡುವಾಗ ನಿಯಮದಂತೆ ಎಲ್ಲ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಸಂಪಾದಕರ ತಂಡದ ಮುಖ್ಯಸ್ಥರ ಪೂರ್ವಾನುಮತಿ ಪಡೆದಿರಬೇಕು. ಸಾರ್ವಜನಿಕ ಹಿತಾಸಕ್ತಿ, ತಪ್ಪು ಬಯಲುಗೊಳಿಸುವ ಉದ್ದೇಶ ಹೊಂದಿರಬೇಕು. ಆದರೆ, ಅದರಿಂದ ವ್ಯಕ್ತಿಯ ಖಾಸಗಿ ಜೀವನಕ್ಕೆ ತೊಂದರೆಯಾಗುವಂತಿರಬಾರದು. ಲಂಚ ಸ್ವೀಕರಿಸುವಂತೆ ಆಮಿಷ ಒಡ್ಡುವಂತಿರಬಾರದು. ಆದರೆ, ಬೆಂಗಳೂರು ಪ್ರವೇಶಿಸಲು ಗ್ರಾನೈಟ್ ಲಾರಿಗಳಿಂದ ಲಂಚ ಸ್ವೀಕರಿಸುತ್ತಿದ್ದಾರೆಂಬ ಆರೋಪದ ಹಿನ್ನೆಲೆಯಲ್ಲಿ ಸಂಚಾರಿ ಪೊಲೀಸರ ಮೇಲಿನ ಪ್ರಕರಣ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.

ಪೊಲೀಸರು ಲಂಚಕ್ಕೆ ಬೇಡಿಕೆ ಇಟ್ಟು ಸ್ವೀಕರಿಸಿರುವ ದೃಶ್ಯಗಳಿವೆ. ಹೀಗಾಗಿ, ಸಂಚಾರ ಪೊಲೀಸರ ವಿರುದ್ಧದ ಕುಟುಕು ಕಾರ್ಯಾಚರಣೆ ಎತ್ತಿಹಿಡಿಯಲಾಗುತ್ತಿದೆ ಎಂದು ನ್ಯಾಯಾಲಯ ಹೇಳಿದೆ. ಆದರೆ, ವಾಣಿಜ್ಯ ತೆರಿಗೆ ಅಧಿಕಾರಿಗಳೂ ಸಹ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆಂಬ ವಿಚಾರ ಸಾಬೀತಾಗದ ಹಿನ್ನೆಲೆಯಲ್ಲಿ ಅವರ ವಿರುದ್ಧ ಸ್ಟಿಂಗ್ ಆಪರೇಷನ್ ಆಧರಿಸಿ ದಾಖಲಿಸಿದ್ದ ಪ್ರಕರಣವನ್ನು ನ್ಯಾಯಾಲಯ ರದ್ದುಗೊಳಿಸಿದೆ.

andolanait

Recent Posts

59 ಸಾವಿರ ಶಿಕ್ಷಕರ ಹುದ್ದೆ ಖಾಲಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ

ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…

5 hours ago

ಮೈಸೂರಿಗೆ ತೆರಳಲು ಅನುಮತಿ ಕೋರಿ ಕೋರ್ಟ್‌ ಮೋರಿ ಹೋದ ದರ್ಶನ್‌

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್‌ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…

5 hours ago

ನಾನು ಅಶ್ಲೀಲ ಪದ ಬಳಸಿಲ್ಲ : ಪೊಲೀಸರ ಬಳಿ ಸಿ.ಟಿ ರವಿ ಹೇಳಿಕೆ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…

6 hours ago

ವೈದ್ಯ ಮೇಲೆ ಹಲ್ಲೆ: ದೂರು ದಾಖಲು

ಮೈಸೂರು: ನಗರದ ಅಲ್‌ ಅನ್ಸಾರ್‌ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ  ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…

6 hours ago

ವಿಶೇಷ ಚೇತನ ಮಕ್ಕಳು ಸಮಾಜಕ್ಕೆ ಶಾಪವಲ್ಲ, ವರ; ದೀಪಕ್‌ ಅಭಿಮತ

' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…

8 hours ago

ಸಕ್ಕರೆ ನಗರಿ ಅಂದ ಹೆಚ್ಚಿಸಿದ ದೀಪಾಲಂಕಾರ

ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್‌ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…

8 hours ago