ಬೆಂಗಳೂರು : ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಯನ್ನು ರದ್ದು ಗೊಳಿಸುವಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ.
ಇದರ ನಡುವೆಯೇ ನೀಡಲಾಗಿದ್ದ ತಡೆಯಾಜ್ಞೆಯನ್ನು ತೆರವುಗೊಳಿಸಿ ತನಿಖೆ ಮುಂದುವರಿಸಿ 3 ತಿಂಗಳಲ್ಲಿ ತನಿಖೆ ಪೂರ್ಣಗೊಳಿಸುವಂತೆ ಹೈಕೋರ್ಟ್ ಸಿಬಿಐಗೆ ಸೂಚಿಸಿದೆ. ಕಳೆದ 2014 ಮತ್ತು 2018ರ ನಡುವೆ ತಮ್ಮ ಆದಾಯಕ್ಕಿಂತ ಮೀರಿ ಆಸ್ತಿ ಗಳಿಸಿದ್ದಾರೆ ಎಂದು 2018ರಲ್ಲಿ ಸಿಬಿಐ ಪ್ರಕರಣ ದಾಖಲಿಸಿತ್ತು. ಇದಲ್ಲದೆ 2023ರಲ್ಲೂ ಪ್ರತ್ಯೇಕ ಪ್ರಕರಣವನ್ನು ದಾಖಲಿಸಲಾಗಿತ್ತು.
ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಡಿ.ಕೆ. ಶಿವಕುಮಾರ್ ಅವರು 2023ರಲ್ಲಿ ಸಿಬಿಐ ತನಿಖೆ ತಡೆ ನೀಡುವಂತೆ ಹೈಕೋರ್ಟ್ ಮೊರೆ ಹೋಗಿದ್ದರು. ಆಗ ಅವರಿಗೆ ಮಧ್ಯಂತರ ತಡೆ ನೀಡಲಾಗಿತ್ತು. ಇದೀಗ ಹೈಕೋರ್ಟ್ ಈಗ ಪುನಃ ತನಿಖೆ ಪುನಾರಂಭಿಸುವಂತೆ ಆದೇಶ ಹೊರಡಿಸಿರುವುದರಿಮದ ಮತ್ತೆ ಡಿ.ಕೆ. ಶಿವಕುಮಾರ್ ಅವರಿಗೆ ಸಂಕಷ್ಟ ಎದುರಾಗಿದೆ.
ತನಿಖೆ ವೇಳೆ ಸಿಬಿಐ 200 ಕೋಟಿ ರೂ. ಅಧಿಕ ಅಕ್ರಮ ಆಸ್ತಿ ಪತ್ತೆ ಯಾಗಿದೆ ಎಂದು ಸಿಬಿಐ ವಾದ ಮಂಡಿಸಿತ್ತು, ತಡೆಯಾಜ್ಞೆ ತೆರವಿಗೆ ಮೇಲ್ಮನವಿ ಸಲ್ಲಿಸಿತ್ತು. ಈಗ ಅದನ್ನು ಮಾನ್ಯ ಮಾಡಿ ನ್ಯಾಯಾಲಯ ತನಿಖೆ ಮುಂದುವರೆಸುವಂತೆ ಸೂಚಿಸಿದೆ. ಸದ್ಯದಲ್ಲೆ ಸಿಬಿಐ ಚಾರ್ಜ್ ಶೀಟ್ ಸಲ್ಲಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದ್ದು ಇದು ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ.
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…