ಬೆಂಗಳೂರು : ಓವರ್ ಸೀಸ್ ಸಿಜಿಟನ್ ಆಫ್ ಇಂಡಿಯಾ ಮಾನ್ಯತೆ ರದ್ದಾಗಿರುವ ನಟ ಚೇತನ್ ವಿರುದ್ಧ್ ಜೂ. 2ರವರೆಗೆ ಕ್ರಮ ಜರುಗಿಸುವುದು ಬೇಡ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ.
ಗಡಿಪಾರು ಭೀತಿ ಎದುರಿಸುತ್ತಿದ್ದ ನಟ ಚೇತನ್ ಗೆ ಹೈಕೋರ್ಟ್ ನ ಈ ಆದೇಶದಿಂದ ತಾತ್ಕಾಲಿತ ರಿಲೀಫ್ ದೊರೆತಿದೆ. ಹೈಕೋರ್ಟ್ ನಿಂದ ಸಿಕ್ಕಿರುವ ಈ ರಿಲೀಫ್ ಷರತ್ತುಬದ್ಧವಾಗಿದೆ.
ನ್ಯಾ. ಎಂ ನಾಗಪ್ರಸನ್ನರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ. ನಟ ಚೇತನ್ ವಿರುದ್ಧ ಸಮುದಾಯಗಳ ನಡುವೆ ದ್ವೇಷ ಮೂಡಿಸುವ ಯತ್ನ ಹಾಗೂ ಭಾರತ ವಿರೋಧಿ ಚಟುವಟಿಕೆ ಆರೋಪಗಳಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ 2018ರಲ್ಲಿ ನಟ ಚೇತನ್ ಗೆ ನೀಡಲಾಗಿದ್ದ ಓವರ್ ಸೀಸ್ ಸಿಟಿಜನ್ ಆಫ್ ಇಂಡಿಯಾ ಕಾರ್ಡ್ ನ್ನು ರದ್ದುಗೊಳಿಸಿತ್ತು.
ಚೇತನ್ ಪರ ವಾದ ಮಂಡಿಸಿದ ವಕೀಲರು ಚೇತನ್ ವಾದ ಆಲಿಸದೇ ಕ್ರಮ ಕೈಗೊಂಡಿರುವುದು ಸರಿಯಲ್ಲವೆಂದು ವಾದಿಸಿದ್ದರು. ಚೇತನ್ ನ್ಯಾಯಾಂಗದ ವಿರುದ್ಧವೂ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಕ್ರಮಕ್ಕೆ ತಡೆ ನೀಡದಂತೆ ಕೇಂದ್ರ, ರಾಜ್ಯ ಸರ್ಕಾರದ ವಕೀಲರಾದ ಎಎಜಿ ಅರುಣ್ ಶ್ಯಾಮ್, ಎಎಸ್ ಜಿ ಶಾಂತಿಭೂಷಣ್ ವಾದಿಸಿದ್ದರು.ವಾದ ಆಲಿಸಿದ ಕೋರ್ಟ್, ಜೂ. 2ರವರೆಗೆ ನಟ ಚೇತನ್ ವಿರುದ್ಧ ಕ್ರಮ ಬೇಡ ಎಂದು ಆದೇಶ ನೀಡಿದೆ.
ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…
ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…
ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…
ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…
ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…
ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…