ಮೈಸೂರು ಪಾಲಿಕೆ ಆಯುಕ್ತರಿಗೆ ಬಂಧನದ ಎಚ್ಚರಿಕೆ ನೀಡಿದ ಹೈಕೋರ್ಟ್

ಮೈಸೂರು: ಸಾರ್ವಜನಿಕ ರಸ್ತೆಗಳ ಒತ್ತುವರಿಗೆ ಸಂಬಂಧಿಸಿದಂತೆ ಸರ್ವೆ ನಡೆಸಿ ವರದಿ ಸಲ್ಲಿಸದ ಹಿನ್ನಲೆಯಲ್ಲಿ ವಾರೆಂಟ್‍ ಜಾರಿಗೊಳಿಸಿದರೂ ನ್ಯಾಯಾಲಯಕ್ಕೆ ಹಾಜರಾಗದ ಮೈಸೂರು ನಗರ ಪಾಲಿಕೆ ಆಯುಕ್ತ ಲಕ್ಷ್ಮಿಕಾಂತ್‍ ರೆಡ್ಡಿ ಗೆ ಹೈಕೋರ್ಟ್ ಬಂಧನದ ಎಚ್ಚರಿಕೆಯ ನೋಟೀಸ್‍ ಅನ್ನು ನೀಡಿದೆ.

ರಸ್ತೆ ಒತ್ತುವರಿಗೆ ಸಂಬಂಧಿಸಿದಂತೆ ನಗರ ಪಾಲಿಕೆ ಮಾಜಿ ಸದಸ್ಯ ಪಿ.ಶ್ರೀಕಂಠಮೂರ್ತಿ ಹಾಗೂ ಇತರರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಬುಧವಾರ ಮುಖ್ಯ ನ್ಯಾಯಮೂರ್ತಿ ರಿತುರಾಜ್‍ ನೇತೃತ್ವದ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂತು.

ಒತ್ತುವರಿಗೆ ಸಂಬಂಧಿಸಿದಂತೆ ಪಾಲಿಕೆ ಆಯುಕ್ತರು ಹಾಗೂ ವಲಯ ಆಯುಕ್ತರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಒತ್ತುವರಿ ತೆರವುಗೊಳಿಸಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಬೇಕೆಂದು ನ್ಯಾಯಾಲಯ ಜೂ.25 ರಂದು ಆದೇಶಿಸಿತ್ತು.

ನ್ಯಾಯಾಲಯದ ನಿರ್ದೇಶನದ ನಂತರ ವರದಿ ಸಲ್ಲಿಸಲು ಮೂರ್ನಾಲ್ಕು ಬಾರಿ ನಗರ ಪಾಲಿಕೆ ಸಮಯವಕಾಶ ಪಡೆದುಕೊಂಡಿತ್ತು. ಆದರೂ ಸಹ ವರದಿ ಸಲ್ಲಿಸದೆ ಇರುವುದಕ್ಕೆ ನ್ಯಾಯಾಲಯ ಅತೃಪ್ತಿ ವ್ಯಕ್ತಪಡಿಸಿ, ಆಯುಕ್ತರನ್ನು ಬಂಧಿಸಲು ಪೊಲೀಸರಿಗೆ ಆದೇಶಿಸಬೇಕಾಗುತ್ತದೆ. ನ್ಯಾಯಾಲಯದ ಆದೇಶಕ್ಕೆ ಅಧಿಕಾರಿಗಳು ಗೌರವ ನೀಡದೆ ಹೋದರೆ ಅಧಿಕಾರಿಗಳಿಂದ ಆದೇಶವನ್ನು ಪಾಲನೆ ಮಾಡುವುದು ಹೇ ಎಂಬುದು ನಮಗೆ ಚೆನ್ನಾಗಿ ತಿಳಿದಿದೆ ಎಂದು ಹೈಕೋರ್ಟ್‍ ತಿಳಿಸಿದೆ.

× Chat with us