ಹಾಸಿಗೆ ಹಗರಣ: ತೇಜಸ್ವಿ ಸೂರ್ಯ ಆರೋಪದ ತನಿಖೆಗೆ ಹೈಕೋರ್ಟ್‌ ಆದೇಶ

ಬೆಂಗಳೂರು: ಕೋವಿಡ್‌ ಹಾಸಿಗೆ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮಾಡಿರುವ ಆರೋಪ ಕುರಿತಂತೆ ತನಿಖೆ ನಡೆಸಲು ಕರ್ನಾಟಕ ಹೈಕೋರ್ಟ್‌ ಆದೇಶ ಹೊರಡಿಸಿದೆ.

ಮುಖ್ಯ ನ್ಯಾಯಮೂರ್ತಿ ಎ.ಎಸ್‌.ಓಕಾ ಮತ್ತು ನ್ಯಾಯಮೂರ್ತಿ ಅರವಿಂದ್‌ ಕುಮಾರ್‌ ಅವರಿದ್ದ ವಿಭಾಗೀಯ ಪೀಠ ಪ್ರಕರಣದ ವಿಚಾರಣೆ ನಡೆಸಿತು.

ಕೋವಿಡ್‌ ಸಂದರ್ಭದಲ್ಲಿ ಬಿಬಿಎಂಪಿ ಮತ್ತು ಆಸ್ಪತ್ರೆಯ ಅಧಿಕಾರಿಗಳು ಹಣಗಳಿಸುವ ಉದ್ದೇಶದಿಂದ ನಕಲಿ ಹೆಸರಿನಲ್ಲಿ ಹಾಸಿಗೆಗಳನ್ನು ಕಾಯ್ದಿರಿಸುತ್ತಿದ್ದಾರೆ ಎಂಬುದು ಸಂಸದರ ಆರೋಪ. ಆದರೆ, ಮುಸ್ಲಿಂ ಸಮುದಾಯಕ್ಕೆ ಸೇರಿದ ನೌಕರರ ಮೇಲೆ ಸಂಸದರು ಆರೋಪ ಮಾಡುತ್ತಿರುವುದು ವಿವಾದಕ್ಕೆ ಕಾರಣವಾಗಿದೆ.

× Chat with us