ಸ್ಥಳೀಯ ಸಂಸ್ಥೆ ಚುನಾವಣೆ ಮುಂದೂಡುವಂತೆ ಕೋರಿದ್ದ ಅರ್ಜಿ ತಿರಸ್ಕರಿಸಿದ ಹೈಕೋರ್ಟ್‌

ಬೆಂಗಳೂರು: ಕೋವಿಡ್‌ ಎರಡನೇ ಅಲೆ ಹರಡುತ್ತಿರುವ ಸಂದರ್ಭದಲ್ಲಿ ಏ.27 ರಂದು ನಡೆಯಲಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಂದೂಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್‌ ತಿರಸ್ಕರಿಸಿದೆ.

ಮುಖ್ಯ ನ್ಯಾಯಮೂರ್ತಿ ಎ.ಎಸ್‌.ಓಕಾ ಹಾಗೂ ನ್ಯಾಯಮೂರ್ತಿ ಸೂರಜ್‌ ಗೋವಿಂದರಾಜ್‌ ಅವರಿದ್ದ ಪೀಠವು ಚುನಾವಣೆ ಮುಂದೂಡಿಕೆಗೆ ಮನವಿ ಮಾಡಿ ಸಲ್ಲಿಸದ್ದ ಎರಡು ಮಧ್ಯಂತರ ಅರ್ಜಿಗಳನ್ನು ತಿರಸ್ಕರಿಸಿ ಆದೇಶ ಹೊರಡಿಸಿದ್ದಾರೆ.

ಅರ್ಜಿ ವಿಚಾರಣೆ ನಡೆಸಿದ್ದ ಪೀಠ, ʻಕೋವಿಡ್‌ ಮೊದಲನೇ ಅಲೆಯ ಸಂದರ್ಭದಲ್ಲಿ ವಿಧಾನಸಭಾ ಚುನಾವಣೆಗಳೇ ನಡೆದಿವೆ ಎಂದರೆ ಈಗೇಕೆ ಸಾಧ್ಯವಿಲ್ಲ?ʼ ಎಂದು ಅಭಿಪ್ರಾಯಪಟ್ಟಿದೆ.

× Chat with us