Mysore
19
broken clouds

Social Media

ಮಂಗಳವಾರ, 23 ಡಿಸೆಂಬರ್ 2025
Light
Dark

ರಾಹುಲ್ ಗಾಂಧಿಗೆ ಶಾಕ್ ನೀಡಿದ ಹೈಕೋರ್ಟ್ : ಉಪನಾಮ ಕೇಸ್‌ ನಲ್ಲಿ ಮಧ್ಯಂತರ ತಡೆಗೆ ನಕಾರ

ಅಹಮ್ಮದಾಬಾದ್ : ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ನಾಯಕರಿಗೆ ಮತ್ತೊಂದು ಹಿನ್ನಡೆಯಾಗಿದೆ. ಮೋದಿ ಸಮುದಾಯ ನಿಂದಿಸಿದ ಆರೋಪದಡಿ ಸೂರತ್ ಕೋರ್ಟ್‌ನಿಂದ 2 ವರ್ಷ ಜೈಲು ಶಿಕ್ಷೆಗೆ ಒಳಗಾದ ರಾಹುಲ್ ಗಾಂಧಿ ಸಂಸದ ಸ್ಥಾನದಿಂದಲೂ ಅನರ್ಹರಾಗಿದ್ದಾರೆ. ಈ ಪ್ರಕರಣಕ್ಕೆ ತಡೆ ನೀಡಬೇಕು ಎಂದು ಕೋರಿ ರಾಹುಲ್ ಗಾಂಧಿ ಗುಜರಾತ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಗುಜರಾತ್ ಹೈಕೋರ್ಟ್ ಪ್ರಕರಣಕ್ಕೆ ಮಧ್ಯಂತರ ತಡೆ ನೀಡಲು ಸಾಧ್ಯವಿಲ್ಲ ಎಂದಿದೆ. ಈ ಕುರಿತು ಜೂನ್ 4ರ ಬಳಿಕ ತೀರ್ಪು ನೀಡುವುದಾಗಿ ಗುಜರಾತ್ ಹೈಕೋರ್ಟ್ ಹೇಳಿದೆ. ಇದರಿಂದ ರಾಹುಲ್ ಗಾಂಧಿ ಅನರ್ಹರಾಗಿಯೇ ಮುಂದುವರಿಯಲಿದ್ದಾರೆ.

ಸೂರತ್ ಕೋರ್ಟ್ ನೀಡಿದ ತೀರ್ಪಿನ ವಿರುದ್ದ ಗುಜರಾತ್ ಹೈಕೋರ್ಟ್‌ನಲ್ಲಿ ರಾಹುಲ್ ಗಾಂಧಿ ಮೇಲ್ಮನವಿ ಸಲ್ಲಿಸಿದ್ದಾರೆ. ಇದರ ಜೊತೆಗೆ ಗುಜರಾತ್ ಹೈಕೋರ್ಟ್ ಈ ತೀರ್ಪು ಬರುವವರೆಗೂ ಪ್ರಕರಣಕ್ಕೆ ತಡೆ ನೀಡಬೇಕು ಎಂದು ಮನವಿ ಮಾಡಿದ್ದರು. ಈ ಕುರಿತು ವಿಚಾರಣೆ ನಡೆಸಿದ ಗುಜರಾತ್ ಹೈಕೋರ್ಟ್ ಪ್ರಕರಣಕ್ಕೆ ಮಧ್ಯಂತರ ತಡೆ ನೀಡಲು ಸಾಧ್ಯವಿಲ್ಲ ಎಂದಿದೆ. ಇಷ್ಟೇ ಅಲ್ಲ ರಾಹುಲ್ ಗಾಂಧಿ ಸಲ್ಲಿಸಿರುವ ಮೇಲ್ಮನವಿ ವಿಚಾರಣೆಯ ತೀರ್ಪು ಜೂನ್ 4ರ ಬಳಿಕ ಪ್ರಕಟಿಸುವುದಾಗಿ ಹೇಳಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!