ಅಹಮ್ಮದಾಬಾದ್ : ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ನಾಯಕರಿಗೆ ಮತ್ತೊಂದು ಹಿನ್ನಡೆಯಾಗಿದೆ. ಮೋದಿ ಸಮುದಾಯ ನಿಂದಿಸಿದ ಆರೋಪದಡಿ ಸೂರತ್ ಕೋರ್ಟ್‌ನಿಂದ 2 ವರ್ಷ ಜೈಲು ಶಿಕ್ಷೆಗೆ ಒಳಗಾದ ರಾಹುಲ್ ಗಾಂಧಿ ಸಂಸದ ಸ್ಥಾನದಿಂದಲೂ ಅನರ್ಹರಾಗಿದ್ದಾರೆ. ಈ ಪ್ರಕರಣಕ್ಕೆ ತಡೆ ನೀಡಬೇಕು ಎಂದು ಕೋರಿ ರಾಹುಲ್ ಗಾಂಧಿ ಗುಜರಾತ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಗುಜರಾತ್ ಹೈಕೋರ್ಟ್ ಪ್ರಕರಣಕ್ಕೆ ಮಧ್ಯಂತರ ತಡೆ ನೀಡಲು ಸಾಧ್ಯವಿಲ್ಲ ಎಂದಿದೆ. ಈ ಕುರಿತು ಜೂನ್ 4ರ ಬಳಿಕ ತೀರ್ಪು ನೀಡುವುದಾಗಿ ಗುಜರಾತ್ ಹೈಕೋರ್ಟ್ ಹೇಳಿದೆ. ಇದರಿಂದ ರಾಹುಲ್ ಗಾಂಧಿ ಅನರ್ಹರಾಗಿಯೇ ಮುಂದುವರಿಯಲಿದ್ದಾರೆ.
ಸೂರತ್ ಕೋರ್ಟ್ ನೀಡಿದ ತೀರ್ಪಿನ ವಿರುದ್ದ ಗುಜರಾತ್ ಹೈಕೋರ್ಟ್‌ನಲ್ಲಿ ರಾಹುಲ್ ಗಾಂಧಿ ಮೇಲ್ಮನವಿ ಸಲ್ಲಿಸಿದ್ದಾರೆ. ಇದರ ಜೊತೆಗೆ ಗುಜರಾತ್ ಹೈಕೋರ್ಟ್ ಈ ತೀರ್ಪು ಬರುವವರೆಗೂ ಪ್ರಕರಣಕ್ಕೆ ತಡೆ ನೀಡಬೇಕು ಎಂದು ಮನವಿ ಮಾಡಿದ್ದರು. ಈ ಕುರಿತು ವಿಚಾರಣೆ ನಡೆಸಿದ ಗುಜರಾತ್ ಹೈಕೋರ್ಟ್ ಪ್ರಕರಣಕ್ಕೆ ಮಧ್ಯಂತರ ತಡೆ ನೀಡಲು ಸಾಧ್ಯವಿಲ್ಲ ಎಂದಿದೆ. ಇಷ್ಟೇ ಅಲ್ಲ ರಾಹುಲ್ ಗಾಂಧಿ ಸಲ್ಲಿಸಿರುವ ಮೇಲ್ಮನವಿ ವಿಚಾರಣೆಯ ತೀರ್ಪು ಜೂನ್ 4ರ ಬಳಿಕ ಪ್ರಕಟಿಸುವುದಾಗಿ ಹೇಳಿದೆ.
ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…
ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…
ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…
ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…