BREAKING NEWS

ಮಾನಸಿಕ ಅಸ್ವಸ್ಥ ಅತ್ಯಾಚಾರ ಸಂತ್ರಸ್ತೆಗೆ 10 ಪಟ್ಟು ಪರಿಹಾರ ಹೆಚ್ಚಿಸಿ ಹೈಕೋರ್ಟ್ ತೀರ್ಪು!

ಬೆಂಗಳೂರು: ಮಾನಸಿಕ ಅಸ್ವಸ್ಥೆ ಮತ್ತು ಮಾತು ಬಾರದ ಅಪ್ರಾಪ್ತ ಅತ್ಯಾಚಾರ ಸಂತ್ರಸ್ತೆಗೆ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಸಂತ್ರಸ್ತ ಪರಿಹಾರ ಯೋಜನೆಯಡಿ ಕರ್ನಾಟಕ ಉಚ್ಚ ನ್ಯಾಯಾಲಯವು 10.50 ಲಕ್ಷ ರು. ಪರಿಹಾರ ಹೆಚ್ಚಿಸಿ ತೀರ್ಪು ನೀಡಿದೆ.

ಪೋಕ್ಸೊ ಕಾಯಿದೆಯ ಅಡಿಯಲ್ಲಿ ಬಾಲಕಿಗೆ ಪರಿಹಾರ ನೀಡಬೇಕು ಎಂದಿರುವ ಹೈಕೋರ್ಟ್, ವಿಶೇಷ ನ್ಯಾಯಾಲಯದ ಆಶಯಗಳು ಮತ್ತು ಕಲ್ಪನೆಗಳನ್ನು ಆಧರಿಸಿರಬಾರದು. 2020 ರ ನಿಯಮ 9 ರ ಆಧಾರದ ಮೇಲೆ ನಿರ್ಧರಿಸಬೇಕು ಮತ್ತು ರಾಷ್ಟ್ರೀಯ ಕಾನೂನ ಸೇವೆಗಳ ಪ್ರಾಧಿಕಾರದ ನಿಯಮವನ್ನು ಅನುಸರಿಸಬೇಕು ಎಂದು ನ್ಯಾಯಮೂರ್ತಿ ಅನಿಲ್ ಬಿ ಕಟ್ಟಿ ಹೇಳಿದ್ದಾರೆ.

ಕಾರವಾರದ ವಿಶೇಷ ನ್ಯಾಯಾಲಯವು 2022ರ ಜನವರಿ 18ರಂದು ಆರೋಪಿಗಳಿಗೆ ಶಿಕ್ಷೆ ವಿಧಿಸುವ ಸಂದರ್ಭದಲ್ಲಿ 1 ಲಕ್ಷ ರೂ.ಗಳ ಪರಿಹಾರವನ್ನು ನೀಡಿತ್ತು. ಈ ಆದೇಶವನ್ನು ತಿರಸ್ಕರಿಸಿರುವ ಹೈಕೋರ್ಟ್ ಪರಿಹಾರವನ್ನು 10.50 ಲಕ್ಷಕ್ಕೆ ಹೆಚ್ಚಿಸಿದೆ.

ಅಪ್ರಾಪ್ತೆಯ ಪುನರ್ವಸತಿಗಾಗಿ ಮಧ್ಯಂತರ ಮತ್ತು ಅಂತಿಮ ಪರಿಹಾರವನ್ನು ನೀಡುವಾಗ ವಿಶೇಷ ನ್ಯಾಯಾಲಯಗಳ ಪಾತ್ರವು ಹೆಚ್ಚಿರುತ್ತದೆ. ಸಂತ್ರಸ್ತೆಯ ಕಲ್ಯಾಣಕ್ಕಾಗಿ ಅವರು ಪ್ರಾಯೋಗಿಕ ವಿಧಾನವನ್ನು ಅಳವಡಿಸಿಕೊಳ್ಳಬೇಕು ಎಂದು ನ್ಯಾಯಾಲಯ ಸೂಚಿಸಿದೆ. ವಿಶೇಷ ನ್ಯಾಯಾಲಯಗಳು ಸಾಕ್ಷಿ, ಸಂತ್ರಸ್ತರು ಅನುಭವಿಸಿದ ಗಾಯದ ಸ್ವರೂಪ, ಮತ್ತಿತರ ಸಂದರ್ಭಗಳನ್ನು ವಿಶ್ಲೇಷಿಸಿ ಪರಿಹಾರವನ್ನು ನಿರ್ಧರಿಸುವಾಗ ಪುನರ್ವಸತಿ, ವೈದ್ಯಕೀಯ ಚಿಕಿತ್ಸೆ ಮತ್ತು ಶಿಕ್ಷಣದ ಅಗತ್ಯವನ್ನು ಪರಿಗಣಿಸಬೇಕು ಎಂದು ನ್ಯಾಯಾಲಯ ಹೇಳಿದೆ.

2010 ರಲ್ಲಿ,ಅಪ್ರಾಪ್ತೆಯ ಪೋಷಕರು ಮತ್ತು ಇಬ್ಬರು ಸಹೋದರರು ಕೂಲಿ ಕೆಲಸ ಮಾಡುತ್ತಿದ್ದರು. ಆಕೆ ಅಂಗವೈಕಲ್ಯ ಮತ್ತು ಮಾನಸಿಕ ಅಸ್ವಸ್ಥಳಾದ ಕಾರಣ ಶಾಲೆಗೆ ಹೋಗುತ್ತಿರಲಿಲ್ಲ, ಹೀಗಾಗಿ ಅಪ್ರಾಪ್ತೆಯನ್ನು ಅವರು ತಮ್ಮ ಜೊತೆ ಕರೆದೊಯ್ಯುತ್ತಿದ್ದರು. ಆಕೆಯ ತಾಯಿಯೊಂದಿಗೆ ಕೆಲಸ ಮಾಡುತ್ತಿದ್ದ ಆರೋಪಿ,  ಆಕೆಯ ಮನೆಯವರೊಂದಿಗಿನ ಪರಿಚಯದ ಲಾಭವನ್ನು ಪಡೆದುಕೊಂಡು ಅಡಿಕೆ ತೋಪಿಗೆ ಹೊತ್ತೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದ.

ಬಾಲಕಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ಆತನ ವಿರುದ್ಧ ಐಪಿಸಿ ಸೆಕ್ಷನ್ 376 ಮತ್ತು ಪೋಕ್ಸೋ ಕಾಯ್ದೆಯ ಸೆಕ್ಷನ್ 4 ಮತ್ತು 6 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಗೆ ಶಿಕ್ಷೆ ವಿಧಿಸುವಾಗ ವಿಚಾರಣಾ ನ್ಯಾಯಾಲಯವು ಕಾರವಾರದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ (ಡಿಎಲ್‌ಎಸ್‌ಎ) ಯುವತಿಯ ಹೆಸರಿನಲ್ಲಿ ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ 1 ಲಕ್ಷ ರೂ. ಡೆಪಾಸಿಟ್ ಮಾಡುವಂತೆ ಸೂಚಿಸಿತ್ತು.

ಜೂನ್ 2022 ರಲ್ಲಿ, DLSA ನ ಸದಸ್ಯ ಕಾರ್ಯದರ್ಶಿ  ಸಂತ್ರಸ್ತೆಗೆ ಪರಿಹಾರ ಬಿಡುಗಡೆ ಮಾಡಲು ವಿನಂತಿಸಿದರು. NALSA ರೂಪಿಸಿದ ಮಾದರಿ ಸಂತ್ರಸ್ತ ಪರಿಹಾರ ಯೋಜನೆ ಮಾರ್ಗಸೂಚಿಗಳ ಪ್ರಕಾರ ಪರಿಹಾರದ ಹೆಚ್ಚಳ ಮಾಡುವಂತೆ  ಮೇಲ್ಮನವಿ ಸಲ್ಲಿಸಲು DLSA ಗೆ KSLSA ನಿರ್ದೇಶನ ನೀಡಿತು. ಹೈಕೋರ್ಟ್ ಕಾನೂನು ಸೇವೆಗಳ ಸಮಿತಿಯು ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿತ್ತು.

andolanait

Recent Posts

ಅಗ್ನಿ ದುರಂತ | ಕೊನೆಗೂ ಅಬಕಾರಿ ಡಿಸಿ ತಲೆದಂಡ

ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ  ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…

13 hours ago

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

15 hours ago

ಗಾಂಧೀ ಅಭಿಯಾನ ಅರಿವಿನ ಯಾನ | ಗಾಂಧೀಜಿ ಅಹಿಂಸಾ ಮಾರ್ಗಕ್ಕೆ ಮೈಲಾರ ಮಹಾದೇವ

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…

15 hours ago

ಗಾಂಧಿ ಅಭಿಯಾನ ಅರಿವಿನ ಯಾನ | ವಿಲಾಯತಿಗೆ ತೆರಳಲು ಅಮ್ಮ ಒಪ್ಪಿದರು

೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…

16 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 27 ಶನಿವಾರ

19 hours ago

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

1 day ago