ಬೆಂಗಳೂರು: ಅಧಿಕ ಉಷ್ಣಾಂಶದ ಕಾರಣ ಮುಂದಿನ ಕೆಲ ದಿನಗಳು ಮಕ್ಕಳು, ವೃದ್ಧರು ಮುಂಜಾಗ್ರತೆ ಕ್ರಮಗಳನ್ನು ಅನುಸರಿಸಬೇಕು. ಅನಾರೋಗ್ಯ ಕಾಣಿಸಿಕೊಂಡಲ್ಲಿ ವೈದ್ಯರನ್ನು ಸಂಪರ್ಕಿಸಬೇಕು ಎಂದು ಆರೋಗ್ಯ ಇಲಾಖೆ ಸೂಚಿಸಿದೆ.
ಈ ಅವಧಿಯಲ್ಲಿ ಅತಿನೇರಳೆ ಕಿರಣಗಳು ತೀಕ್ಷ್ಣವಾಗಿರುತ್ತವೆ. ಆದ್ದರಿಂದ ಮಕ್ಕಳು ಹಾಗೂ ವೃದ್ಧರ ಆರೋಗ್ಯಕ್ಕೆ ಆದ್ಯತೆ ನೀಡಬೇಕು. ಸಾಂಕ್ರಾಮಿಕ ರೋಗತಡೆಗೆ ಶುದ್ಧ ನೀರು ಕುಡಿಯುವುದು ಬಹಳ ಮುಖ್ಯ. ರಸ್ತೆ ಬದಿಯಲ್ಲಿ ತೆರೆದಿಟ್ಟ ಆಹಾರ ಪದಾರ್ಥ ಹಾಗೂ ಕತ್ತರಿಸಿದ ಹಣ್ಣುಗಳನ್ನು ತಿನ್ನುವುದರಿಂದ ರೋಗಾಣುಗಳು ಹರಡಿ, ಸಾಂಕ್ರಾಮಿಕ ರೋಗ ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆ ಎಂದು ಇಲಾಖೆ ಹೇಳಿದೆ.
ಮಕ್ಕಳನ್ನು ಶಾಖದ ಅಲೆಯಿಂದ ರಕ್ಷಿಸಲು ನಿಂಬೆ ಹಣ್ಣಿನ ರಸ ಸೇರಿಸಿದ ನೀರು, ಮಜ್ಜಿಗೆ, ಎಳನೀರು, ತಾಜಾ ಹಣ್ಣಿನ ರಸ ನೀಡಬೇಕು. ತಿಳಿ ಬಣ್ಣದ, ಹಗುರವಾದ ಹತ್ತಿ ಬಟ್ಟೆಗಳನ್ನು ಧರಿಸಬೇಕು. ತಾಜಾ ಹಣ್ಣುಗಳು, ಸಲಾಡ್‌ಗಳು, ಮನೆಯಲ್ಲಿ ತಯಾರಿಸಿದ ಊಟ ಸೇವಿಸಬೇಕು. ಹೊರಗಿನ ಆಹಾರ ಸುರಕ್ಷಿತವಲ್ಲ. ಮಧ್ಯಾಹ್ನ 12ರಿಂದ ಸಂಜೆ 4 ಗಂಟೆ ಅವಧಿಯಲ್ಲಿ ಆದಷ್ಟೂ ಒಳಾಂಗಣ ಪ್ರದೇಶದಲ್ಲಿ ಇರಬೇಕು ಎಂದು ತಿಳಿಸಿದೆ.
ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್ ಪಾವತಿಗಳ ಮೇಲಿನ…
ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…
ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…
ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…
ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…
ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…