Mysore
30
broken clouds

Social Media

ಬುಧವಾರ, 30 ಸೆಪ್ಟೆಂಬರ್ 2026
Light
Dark

ಹೈಕಮಾಂಡ್‌ ಜೊತೆ ಹೈವೋಲ್ಟೇಜ್ ಮೀಟಿಂಗ್ : ದೆಹಲಿಯತ್ತ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ದೆಹಲಿಯಲ್ಲಿ ಹೈಕಮಾಂಡ್‌ ಜೊತೆ ನಡೆಯಲಿರುವ ಹೈವೋಲ್ಟೇಜ್ ಮೀಟಿಂಗ್‌ನಲ್ಲಿ ಭಾಗಿಯಾಗಲು ಸಿಎಂ ಸಿದ್ದರಾಮಯ್ಯ ಅವರು ದೆಹಲಿಗೆ ತೆರಳಿದರು. ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳಿದ ಸಿದ್ದರಾಮಯ್ಯ, ವರಿಷ್ಠರ ಜೊತೆಗೆ ಸಭೆ ನಡೆಸುವುದರ ಜೊತೆಗೆ ಕೇಂದ್ರ ಸಚಿವರ ಜೊತೆಗೂ ಸಭೆಯನ್ನು ನಡೆಸಲಿದ್ದಾರೆ.

ಲೋಕಸಭಾ ಚುನಾವಣೆ ಸಿದ್ದತೆ ಹಾಗೂ ಪಕ್ಷದ ಸಂಘಟನೆಯ ದೃಷ್ಟಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಸೇರಿದಂತೆ ರಾಷ್ಟ್ರೀಯ ನಾಯಕರ ಜೊತೆಗೆ ಮೊದಲು ಸಭೆ ನಡೆಯಲಿದೆ. ಈ ಸಭೆಯಲ್ಲಿ ಚುನಾವಣೆಯ ಸಿದ್ದತೆಗಳ ಕುರಿತಾಗಿ ಚರ್ಚೆ ನಡೆಯಲಿದೆ.

ಈಗಾಗಲೇ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ರಾಹುಲ್ ಗಾಂಧಿಯ ಜೊತೆಗೆ ಸಚಿವರ ಸಭೆ ನಡೆಯಲಿರುವ ಹಿನ್ನೆಲೆಯಲ್ಲಿ ಬಹುತೇಕ ಸಚಿವರು ದೆಹಲಿಗೆ ತೆರಳಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!