ಬೆಂಗಳೂರು : ದೆಹಲಿಯಲ್ಲಿ ಹೈಕಮಾಂಡ್ ಜೊತೆ ನಡೆಯಲಿರುವ ಹೈವೋಲ್ಟೇಜ್ ಮೀಟಿಂಗ್‌ನಲ್ಲಿ ಭಾಗಿಯಾಗಲು ಸಿಎಂ ಸಿದ್ದರಾಮಯ್ಯ ಅವರು ದೆಹಲಿಗೆ ತೆರಳಿದರು. ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳಿದ ಸಿದ್ದರಾಮಯ್ಯ, ವರಿಷ್ಠರ ಜೊತೆಗೆ ಸಭೆ ನಡೆಸುವುದರ ಜೊತೆಗೆ ಕೇಂದ್ರ ಸಚಿವರ ಜೊತೆಗೂ ಸಭೆಯನ್ನು ನಡೆಸಲಿದ್ದಾರೆ.
ಲೋಕಸಭಾ ಚುನಾವಣೆ ಸಿದ್ದತೆ ಹಾಗೂ ಪಕ್ಷದ ಸಂಘಟನೆಯ ದೃಷ್ಟಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಸೇರಿದಂತೆ ರಾಷ್ಟ್ರೀಯ ನಾಯಕರ ಜೊತೆಗೆ ಮೊದಲು ಸಭೆ ನಡೆಯಲಿದೆ. ಈ ಸಭೆಯಲ್ಲಿ ಚುನಾವಣೆಯ ಸಿದ್ದತೆಗಳ ಕುರಿತಾಗಿ ಚರ್ಚೆ ನಡೆಯಲಿದೆ.
ಈಗಾಗಲೇ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ರಾಹುಲ್ ಗಾಂಧಿಯ ಜೊತೆಗೆ ಸಚಿವರ ಸಭೆ ನಡೆಯಲಿರುವ ಹಿನ್ನೆಲೆಯಲ್ಲಿ ಬಹುತೇಕ ಸಚಿವರು ದೆಹಲಿಗೆ ತೆರಳಿದ್ದಾರೆ.
ಟಾಂಗಾ ಸವಾರಿ ವಲಯ ನಿರ್ಮಾಣಕ್ಕೆ ೨.೭೧ ಕೋಟಿ ರೂ. ಮಂಜೂರು ಕೇಂದ್ರದ ಸ್ವದೇಶ ದರ್ಶನ ಯೋಜನೆಯಡಿ ಗ್ರೀನ್ ಟೂರ್‌ಗೆ ಆದ್ಯತೆ …
ಹಾಸನ ಜಿಲ್ಲೆ ಹಳೇಬೀಡಿನ ಪುಷ್ಪಗಿರಿ ಮಠದಲ್ಲಿ ಆಯೋಜನೆ: ಡಾ.ಅನಂತರಾವ್ ಮಂಡ್ಯ: ಕರ್ನಾಟಕ ರಾಜ್ಯ ರೈತಸಂಘ ಮತ್ತು ಹಸಿರು ಸೇನೆ ವತಿಯಿಂದ…
ಕೋಟಿಗಾನಹಳ್ಳಿ ರಾಮಯ್ಯ ಇದು ಕದಡಿದ ನೀರಿನಂತಹ ಕಾಲ. ಈ ಮಬ್ಬಿನ ವಾತಾವರಣದಲ್ಲಿ ಬಹುರೂಪಿ ರಂಗಾಯಣದಲ್ಲಿ ‘ಬಹುರೂಪಿ ಅಂಬೇಡ್ಕರ್’ ಎಂಬ ಆಶಯ…
ಸ್ಟ್ಯಾನ್ಲಿ ‘ನನ್ನಮ್ಮ ರೋಸ್ಮಂಡ್ ವಾನಿಂಗನ್ ಆಂಗ್ಲ ಮಹಿಳೆಯಾಗಿದ್ದರೂ, ಅವಳು ನಂಜನಗೂಡಿನ ನಂಜಿಯಾಗಿದ್ದಳು. ಬಿಸಿಲ್ ಮಂಟಿ ಗ್ರಾಮಸ್ಥರು ಆಕೆಗೆ ಇಟ್ಟಿದ್ದ ಹೆಸರಾಗಿತ್ತದು.…
ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…