ಮೈಸೂರು : ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕರ್ನಾಟಕದಾದ್ಯಂತ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ನಿಷೇಧಿಸಿದ್ದ ಹೊರಡಿಸಲಾಗಿದ್ದ ಆದೇಶವನ್ನು ಹಿಂಪಡೆಯಲಾಗಿದೆ ಎಂದು ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ.
ನಂಜನಗೂಡು ತಾಲೂಕಿನ ಕವಲಂದೆ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ಮೋದಿ ಅವರ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಬೋಗಸ್. ಬಟ್ಟೆ, ಉಡುಪು, ಜಾತಿ, ಆಧಾರದ ಮೇಲೆ ಜನರನ್ನು ವಿಭಜಿಸುವ, ಸಮಾಜವನ್ನು ವಿಭಜಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಹೀಗಾಗಿ ಹಿಜಾಬ್ ನಿಷೇಧವನ್ನು ವಾಪಾಸ್ ಪಡೆಯಲು ಹೇಳಿದ್ದೇನೆ. ಈ ಮೂಲಕ ಹಿಜಾಬ್ ನಿಷೇಧವನ್ನು ವಾಪಸ್ ಪಡೆಯಲು ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಸಾರ್ವಜನಿಕರಿಂದ ಬಂದ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ನೋ ಹಿಜಾಬ್, ಎಲ್ಲರು ಹಿಜಾಬ್ ಹಾಕಿಕೊಂಡು ಹೋಗಬಹುದು. ಆದೇಶ ಹಿಂಪಡೆಯಲು ಹೇಳಿದ್ದೇನೆ. ಡ್ರೆಸ್, ಊಟ ಮಾಡುವುದು ನಿಮಗೆ ಸೇರಿದ್ದು. ನಾನೇಕೆ ನಿಮಗೆ ಅಡ್ಡಿ ಪಡಿಸಲಿ. ನೀನು ಯಾವ್ ಡ್ರೆಸ್ ಹಾಕಿಕೊಳ್ಳುತ್ತೀಯಾ ಹಾಕಿಕೋ. ನೀನು ಯಾವ ಊಟ ಮಾಡುತ್ತೀಯಾ ಮಾಡು. ನೀನು ಊಟ ಮಾಡುವುದು ನಿನ್ನ ಹಕ್ಕು. ನಾನು ಊಟ ಮಾಡುವುದು ನನ್ನ ಹಕ್ಕು. ನಾನು ದೋತಿ ಮತ್ತು ಜುಬ್ಬ ಹಾಕಿಕೊಳ್ಳುತ್ತೇನೆ. ನೀನು ಪ್ಯಾಂಟ್ ಶರ್ಟ್ ಹಾಕಿಕೊಂಡರೆ ಹಾಕಿಕೋ, ಇದರಲ್ಲಿ ತಪ್ಪೇನಿದೆ. ಮತಕ್ಕಾಗಿ ರಾಜಕಾರಣ ಮಾಡುವುದು ತಪ್ಪು. ಬಡವರಿಗಾಗಿ ನಮ್ಮ ಸರ್ಕಾರ ಕೆಲಸ ಮಾಡುತ್ತೆ. ಇದರಿಂದ ವಿಚಲಿತರಾಗುವ ಪ್ರಶ್ನೆ ಇಲ್ಲ. ರಾಜೀ ಮಾಡಿಕೊಳ್ಳುವ ಪ್ರಶ್ನೆ ಇಲ್ಲ. ಸುಳ್ಳು, ಮೋಸ ಮಾಡುವವರ ಜೊತೆ ಇರಬೇಡಿ ಎಂದರು.
ಈ ಮೂಲಕ ಹಿಂದಿನ ಬಿಜೆಪಿ ಸರ್ಕಾರವು ಶೈಕ್ಷಣಿಕ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧ ಮಾಡಿ ಹೊರಡಿಸಿದ್ದ ಆದೇಶವನ್ನು ಸದ್ಯ ಕಾಂಗ್ರೆಸ್ ಸರ್ಕಾರ ತೆರವು ಮಾಡುತ್ತಿದೆ. ಕಾಂಗ್ರೆಸ್, ಬಿಜೆಪಿ ನಡುವಿನ ಹಿಜಾಬ್ ನಿಷೇಧ ಮತ್ತೆ ಭುಗಿಲೇಳಲಿದೆಯಾ ಎಂಬುದನ್ನು ಕಾಣಬೇಕಿದೆ.
ಇನ್ನು ಈ ವಿಚಾರವನ್ನು ಬಿಜೆಪಿ ಮುಂದಿನ ಲೋಕಸಭಾ ಚುನಾವಣೆಗೆ ಹೇಗೆ ಅಸ್ತ್ರವಾಗಿ ಬಳಸಿಕೊಳ್ಳಲಿದೆ ಎಂಬುದನ್ನು ಕಾದುನೋಡಬೇಕಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…