ಶಿಮ್ಲಾ : ಭಾರಿ ಮಳೆಯಿಂದ ಆಗಿರುವ ಹಾನಿಯನ್ನು ಹಿಮಾಚಲ ಪ್ರದೇಶ ಸರ್ಕಾರವು ರಾಜ್ಯ ನೈಸರ್ಗಿಕ ವಿಕೋಪ ಎಂದು ಘೋಷಿಸಿದೆ.
ಶುಕ್ರವಾರದ ಅಂತ್ಯಕ್ಕೆ ಮಳೆಪೀಡಿತ ಹಿಮಾಚಲ ಪ್ರದೇಶದಲ್ಲಿ ಒಟ್ಟು 77 ಮಂದಿ ಮೃತಪಟ್ಟಿರುವ ಬೆನ್ನಿಗೇ ಈ ಘೋಷಣೆ ಹೊರ ಬಿದ್ದಿದೆ. ಇದಲ್ಲದೆ ಬೇಸಿಗೆ ಗುಡ್ಡಗಾಡು ಪ್ರದೇಶದಲ್ಲಿರುವ ಶಿವ ದೇವಾಲಯದ ಅವಶೇಷಗಳಡಿಯಲ್ಲಿ ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ಭಾರಿ ಮಳೆಯಿಂದ ಮೃತಪಟ್ಟವರ ಸಂಖ್ಯೆ ಈವರಗೆ ಅಧಿಕೃತವಾಗಿ 77ಕ್ಕೆ ಏರಿಕೆಯಾಗಿದೆ.
ಶಿವ ದೇವಾಲಯದ ಅವಶೇಷಗಳಡಿ ಇನ್ನೂ ನಾಲ್ಕು ಮಂದಿ ಸಿಲುಕಿರುವ ಸಾಧ್ಯತೆ ಇದೆ ಎಂದು ಶಿಮ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಜೀವ್ ಕುಮಾರ್ ಗಾಂಧಿ PTI ಸುದ್ದಿ ಸಂಸ್ಥೆಗೆ ತಿಳಸಿದ್ದಾರೆ.
ರಾಜ್ಯದಲ್ಲಿ ಪ್ರಕಟವಾಗಿರುವ ರಾಜ್ಯ ಅಧಿಸೂಚನೆಯ ಪ್ರಕಾರ, ಭಾರಿ ಮಳೆಯಿಂದ ಆಗಿರುವ ಜೀವ ಹಾನಿಯನ್ನು ಗಣನೆಗೆ ತೆಗೆದುಕೊಂಡು ಸಂಪೂರ್ಣ ಗುಡ್ಡಗಾಡು ರಾಜ್ಯವನ್ನು “ನೈಸರ್ಗಿಕ ವಿಕೋಪಕ್ಕೆ ತುತ್ತಾಗಿರುವ ರಾಜ್ಯ” ಎಂದು ಘೋಷಿಸಲಾಗಿದೆ.
ರವಿವಾರದಿಂದ ಈ ಗುಡ್ಡುಗಾಡು ರಾಜ್ಯದಲ್ಲಿ ಭಾರಿ ಮಳೆಯಾಗಿದ್ದು, ಶಿಮ್ಲಾ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಭೂಕುಸಿತಕ್ಕೆ ಕಾರಣವಾಗಿದೆ.
ರಕ್ಷಣಾ ಕಾರ್ಯಾಚರಣೆಗಳು ಪೂರ್ಣ ಪ್ರಮಾಣದಲ್ಲಿ ನಡೆಯುತ್ತಿದ್ದು, ಸಂತ್ರಸ್ತ ಕುಟುಂಬಗಳಿಗೆ ನೆರವು ನೀಡಲು ರಾಜ್ಯ ಸರ್ಕಾರ ಎಲ್ಲ ಪ್ರಯತ್ನಗಳನ್ನೂ ಮಾಡುತ್ತಿದೆ. ವಿಶೇಷವಾಗಿ ಭಾರಿ ಪ್ರವಾಹದಿಂದ ಮನೆ ಹಾನಿಗೀಡಾಗಿರುವವರು ಹಾಗೂ ಭೂಕುಸಿತಕ್ಕೆ ಸಿಲುಕಿರುವ ಕುಟುಂಬಗಳಿಗೆ ರಾಜ್ಯ ಸರ್ಕಾರವು ತನ್ನದೇ ಸಂಪನ್ಮೂಲಗಳ ಮೂಲಕ ನೆರವು ನೀಡಲಿದೆ ಎಂದು ಮುಖ್ಯಮಮತ್ರಿ ಸುಖ್ವಿಂದರ್ ಸಿಂಗ್ ಸುಖು ತಿಳಿಸಿದ್ದಾರೆ.
ಮಂಡ್ಯ: ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ. ಈ ನಿಟ್ಟಿನಲ್ಲಿ 10ನೇ ತರಗತಿವರೆಗೆ ಕನ್ನಡ ಮಾಧ್ಯಮ ಕಡ್ಡಾಯವಾಗಬೇಕು. ಇಂಗ್ಲೀಷ್ ಮಾಧ್ಯಮದ ಶಾಲೆ ತೆರೆಯುವುದನ್ನು…
ಹನೂರು: ತಾಲ್ಲೂಕಿನ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಪಲ್ಟಿಯಾಗಿ ಇಬ್ಬರು ಗಾಯಗೊಂಡಿರುವ ಘಟನೆ ಜರುಗಿದೆ.…
ಕಲಬುರ್ಗಿ: ಸಂವಿಧಾನದ ವಿಧಿ 371 ( ಜೆ ) ಜಾರಿಗೆ ಬಂದ ನಂತರ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ ಹಾಗೂ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಪದ ಬಳಕೆ ಪ್ರಕರಣ ವಿಚಾರವಾಗಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು…
ಬೆಂಗಳೂರು: ಬಿಜೆಪಿ ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಬಂಧನಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ ಎನ್ನುವುದು ನನ್ನ ಅನುಮಾನ ಎಂದು…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ…