BREAKING NEWS

ಶ್ರೀರಂಗಪಟ್ಟಣ ಹನುಮ ಸಂಕೀರ್ತನಾ ಯಾತ್ರೆ: ಮಸೀದಿ ಬಳಿ ನಿಲ್ಲಲು ಬಿಡದಿದ್ದಕ್ಕೆ ಮಾಲಾಧಾರಿಗಳ ಆಕ್ರೋಶ

ಇಂದು ( ಡಿಸೆಂಬರ್‌ 24 ) ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಹಿಂದೂ ಜಾಗರಣಾ ವೇದಿಕೆ ಹನುಮ ಸಂಕೀರ್ತನಾ ಯಾತ್ರೆಗೆ ಕರೆಕೊಟ್ಟಿದ್ದು, ಈ ಯಾತ್ರೆಯಲ್ಲಿ ಹಲವಾರು ಜನರು ಮಾಲೆ ಧರಿಸಿ ಪಾಲ್ಗೊಂಡಿದ್ದಾರೆ. ಈ ಸಂಕೀರ್ತನಾ ಯಾತ್ರೆ ನಿಮಿಷಾಂಬಾ ದೇವಸ್ಥಾನದ ಬಳಿ ಇರುವ ಆಂಜನೇಯ ದೇವಾಲಯದಿಂದ ಆರಂಭಗೊಳ್ಳಲಿದ್ದು ಪುರಸಭೆ ವೃತ್ತದ ಮೂಲಕ ಶ್ರೀ ರಂಗನಾಥ ಸ್ವಾಮಿ ದೇಗುಲದ ಬಳಿ ಅಂತ್ಯಗೊಳ್ಳಲಿದೆ.

ಇನ್ನು ಈ ಯಾತ್ರೆ ಘೋಷಣೆಯಾದಾಗಲೇ ಕೆಲ ಮುಸ್ಲಿಂ ಸಂಘಟನೆಗಳು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದವು. ಹೀಗಾಗಿ ಯಾತ್ರೆಯುದ್ದಕ್ಕೂ ಯಾವುದೇ ಗಲಭೆಗಳು ನಡೆಯಬಾರದು ಎಂಬ ಕಾರಣಕ್ಕೆ ಬಿಗಿ ಪೊಲೀಸ್‌ ಬಂದೋಬಸ್ತ್‌ ಏರ್ಪಡಿಸಲಾಗಿತ್ತು. ಆದರೂ ಸಹ ಜಾಮಿಯಾ ಮಸೀದಿ ಬಳಿ ಮಾಲಾಧಾರಿಗಳು ತಲುಪಿದಾಗ ಪೊಲೀಸರು ಹಾಗೂ ಮಾಲಾಧಾರಿಗಳ ನಡುವೆ ಮಾತಿನ ಚಕಮಕಿ ನಡೆದಿದ್ದು, ಕೆಲ ಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

ಜಾಮಿಯಾ ಮಸೀದಿ ಬಳಿ ನಿಲ್ಲಲು ಬಿಡದ ಕಾರಣ ಈ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಕೇಳಿಬಂದಿದ್ದು, ಜಾಮಿಯಾ ಮಸೀದಿ ಮುಂದೆ ಮಾಲಾಧಾರಿಗಳು ಜೈ ಹನುಮಾನ್‌ ಘೋಷಣೆಯನ್ನು ಕೂಗಿ ಮುಂದೆ ಸಾಗಿದ್ದಾರೆ.

andolana

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

2 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

3 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

4 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

6 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

6 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

7 hours ago