ಸಿಎಂಗೆ ಕೊಲೆ ಬೆದರಿಕೆ ಹಾಕಿದ್ದ ಧರ್ಮೇಂದ್ರ ಬಂಧನ!

ಮಂಗಳೂರು: ಈಚೆಗಷ್ಟೇ ಸುದ್ದಿಗೋಷ್ಠಿ ನಡೆಸಿ ಮುಖ್ಯಮಂತ್ರಿಗೆ ಕೊಲೆ ಮಾಡುವಂತೆ ಬೆದರಿಕೆ ಹಾಕಿದ್ದ ಆರೋಪದ ಅಡಿಯಲ್ಲಿ ಹಿಂದೂ ಮಹಾಸಭಾ ರಾಜ್ಯ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರನನ್ನು ಬಂಧಿಸಿರುವುದಾಗಿ ಮಂಗಳೂರು ಪೊಲೀಸ್‌ ಎನ್‌.ಶಶಿಕುಮಾರ್‌ ತಿಳಿಸಿದ್ದಾರೆ.

ʻಗಾಂಧೀಜಿಯನ್ನೇ ಹತ್ಯೆ ಮಾಡಲು ಸಾಧ್ಯವಾಗುತ್ತದೆ ಎಂದ ಮೇಲೆ ನಿಮ್ಮ ವಿಚಾರದಲ್ಲಿ ಸಾಧ್ಯವಿಲ್ಲ ಅಂತೀರಾ? ಎಂದು ಪ್ರಶ್ನಿಸಿ ಅಖಿಲ ಭಾರತ ಹಿಂದೂ ಮಹಾಸಭಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ವಿವಾದ ಹುಟ್ಟು ಹಾಕಿದ್ದರು. ಧರ್ಮೇಂದ್ರ ವಿರುದ್ಧ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

× Chat with us