Mysore
30
light rain

Social Media

ಗುರುವಾರ, 03 ಅಕ್ಟೋಬರ್ 2024
Light
Dark

ರಾಜ್ಯದಲ್ಲಿ ಹಿಂದೂ ವಿವಾಹ ಪ್ರಮಾಣಪತ್ರ ಆನ್​ ಲೈನ್​ನಲ್ಲಿ ಲಭ್ಯ: ಬಿ.ಆರ್​ ಮಮತಾ

ಬೆಂಗಳೂರು : ನೋಂದಣಿ ಮತ್ತು ಮುದ್ರಾಂಕ ಇಲಾಖೆ ಶೀಘ್ರದಲ್ಲೇ ಹಿಂದೂ ವಿವಾಹ ಪ್ರಮಾಣಪತ್ರವನ್ನು ಆನ್​ಲೈನ್​ನಲ್ಲಿ ವಿತರಿಸಲಾಗುವುದು ಎಂದು ವರದಿಯಾಗಿದೆ. ಸದ್ಯ ಈ ಪ್ರಕ್ರಿಯೆ ನಡೆಯುತ್ತಿದೆ. ಆನ್ ಲೈನ್ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಪರೀಕ್ಷಿಸಿ ಸಿದ್ಧಗೊಳಿಸಲಾಗಿದೆ. ಶೀಘ್ರದಲ್ಲೇ ಪ್ರಾರಂಭಿಸಲಾಗುವುದು ಎಂದು ನೋಂದಣಿ ಮತ್ತು ಮುದ್ರಾಂಕ ಇಲಾಖೆ ಅಧಿಕಾರಿ ಬಿ.ಆರ್​ ಮಮತಾ ತಿಳಿಸಿದ್ದಾರೆ.

ಪ್ರಸ್ತುತ ಯಾವುದೇ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಅಥವಾ ಆನ್​ ಲೈನ್​ನಲ್ಲಿ​​ ಲಭ್ಯವಿರುವ ‘ಮೆಮೊರಾಂಡಮ್ ಆಫ್ ಮ್ಯಾರೇಜ್’ ಫಾರ್ಮ್ ಅನ್ನು 15 ರೂ.ಗಳ ಶುಲ್ಕ ನೀಡಿ ಭರ್ತಿ ಮಾಡಬೇಕು. ವಧು ಮತ್ತು ವರರು ಹೆಸರು, ವಯಸ್ಸು, ಪ್ರಸ್ತುತ ವೈವಾಹಿಕ ಸ್ಥಿತಿ, ವಿವಾಹದ ದಿನಾಂಕ, ನಿವಾಸ ವಿಳಾಸ, ವಿವಾಹದ ಸ್ಥಳ, ಸಹಿ ಮತ್ತು ಮೂವರು ಸಾಕ್ಷಿಗಳ ಬಗ್ಗೆ ಮಾಹಿತಿ ಒದಗಿಸಬೇಕು.
ಮದುವೆಯ ಸಮಯದಲ್ಲಿ ತೆಗೆದ ಫೋಟೋ ಮತ್ತು ಆಮಂತ್ರಣ ಪತ್ರಿಕೆಯನ್ನು ಸಹ ಸಲ್ಲಿಸಬೇಕು. ಪ್ರಮಾಣಪತ್ರಕ್ಕೆ ಸಬ್ ರಿಜಿಸ್ಟ್ರಾರ್ ಸಹಿ ಮಾಡುತ್ತಾರೆ. ಇದೆಲ್ಲವೂ ಸುಮಾರು ಅರ್ಧ ಗಂಟೆ ಸಮಯ ತೆಗೆದುಕೊಳ್ಳುತ್ತದೆ. ಆದರೆ ಇದೆಲ್ಲವೂ ಇನ್ನು ಮುಂದೆ ಆನ್ ಲೈನ್​ನಲ್ಲಿ ಲಭ್ಯವಾಗಲಿದೆ. ಮದುವೆ ಪ್ರಮಾಣಪತ್ರ ಅಗತ್ಯವಿರುವವರು igr.karnataka.gov.in ಮುದ್ರಾಂಕ ಮತ್ತು ನೋಂದಣಿ ಇಲಾಖೆಯ ವೆಬ್​ಸೈಟ್​ಗೆ ಭೇಟಿ ನೀಡಿ ವಿವರಗಳನ್ನು ನಮೂದಿಸಬಹುದಾಗಿದೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ದಂಪತಿ ಮತ್ತು ಸಾಕ್ಷಿಗಳ ಆಧಾರ್​ ಕಾರ್ಡ್​​ ಅನ್ನು ಲಗತ್ತಿಸಬೇಕು. ಆಧಾರ್ ಸಕ್ರಿಯಗೊಳಿಸಿದ ಇ-ಸಹಿಗಳನ್ನು ಸ್ವೀಕರಿಸಲಾಗುತ್ತದೆ. ಆಧಾರ್ ಸಂಖ್ಯೆಯನ್ನು ನಮೂದಿಸಿ ಮತ್ತು ಕಾರ್ಡ್​ನಿಂದ ಸಹಿಯನ್ನು ಪಡೆಯಬೇಕಾಗುತ್ತದೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿವರಗಳನ್ನು ಸಬ್ ರಿಜಿಸ್ಟ್ರಾರ್ ಪರಿಶೀಲಿಸಬೇಕಾಗಿರುವುದರಿಂದ ಪ್ರಮಾಣಪತ್ರವು ಒಂದು ದಿನದ ನಂತರ ಲಭ್ಯವಾಗುತ್ತದೆ. ಪ್ರಮಾಣಪತ್ರ ಪಡೆಯಲು ಮುದ್ರಾಂಕ ಮತ್ತು ನೋಂದಣಿ ಇಲಾಖೆ ಪೋರ್ಟಲ್​​ಗೆ ಲಾಗಿನ್​ ಆಗಬೇಕು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ