BREAKING NEWS

ಹಿಂದೂ ಧರ್ಮ ಇಸ್ಲಾಂಗಿಂತ ಹಳೆಯದು : ಗುಲಾಂ ನಬಿ ಆಜಾದ್

ಶ್ರೀನಗರ : ಕಾಂಗ್ರೆಸ್‌ನ ಮಾಜಿ ನಾಯಕ ಗುಲಾಂ ನಬಿ ಆಜಾದ್ ಅವರು ಮುಸ್ಲಿಮರ ಮೂಲದ ಬಗ್ಗೆ ಹೇಳಿಕೆಯೊಂದನ್ನು ನೀಡಿದ್ದು, ಹಿಂದೂ ಧರ್ಮವು ಇಸ್ಲಾಂ ಧರ್ಮಕ್ಕಿಂತ ಹಳೆಯದು ಎಂದಿದ್ದಾರೆ.

ಆಗಸ್ಟ್ 14ರಂದು ದೋಡಾ ಜಿಲ್ಲೆಯಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಮಗೆ ಕಾಶ್ಮೀರದ ಉದಾಹರಣೆ ಇದೆ. 600 ವರ್ಷಗಳ ಹಿಂದೆ ಕಾಶ್ಮೀರದಲ್ಲಿ ಮುಸ್ಲಿಮರು ಇರಲಿಲ್ಲ. ಕಾಶ್ಮೀರಿ ಪಂಡಿತರು ಇಸ್ಲಾಂಗೆ ಮತಾಂತರಗೊಂಡರು. ಭಾರತದಲ್ಲಿ ಮಾತ್ರವಲ್ಲ, ಜಗತ್ತಿನಲ್ಲಿ ಇಸ್ಲಾಂ ಧರ್ಮ 1,500 ವರ್ಷಗಳ ಹಿಂದೆ ಬಂದಿತ್ತು. ಆದರೆ ಹಿಂದೂ ಧರ್ಮ ಬಹಳ ಹಳೆಯದು ಎಂದರು.

ಇಸ್ಲಾಂ ಧರ್ಮ ಹೊರಗಿನಿಂದ ಬಂದಿರಬೇಕು, 10-20 ಜನರು ಮೊಘಲ್ ಸೈನ್ಯದಿಂದ ಬಂದಿರಬೇಕು. ಉಳಿದವರು ಹಿಂದೂ ಮತ್ತು ಸಿಖ್ ಧರ್ಮದಿಂದ ಮತಾಂತರಗೊಂಡಿದ್ದಾರೆ ಎಂದು ಹೇಳಿದ್ದಾರೆ. ಇದೀಗ ಅವರ ಹೇಳಿಕೆಯ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ವಿಡಿಯೋದಲ್ಲಿ ಆಜಾದ್ ಅವರು, ನಾವು ಹಿಂದೂಗಳು. ಮುಸ್ಲಿಮರು, ದಲಿತರು, ಕಾಶ್ಮೀರಿಗಳಿಗಾಗಿ ರಾಜ್ಯವನ್ನು ನಿರ್ಮಿಸಿದ್ದೇವೆ. ಇದು ನಮ್ಮ ಭೂಮಿ. ಇಲ್ಲಿ ಯಾರೂ ಹೊರಗಿನಿಂದ ಬಂದಿಲ್ಲ ಎಂದು ಹೇಳಿದ್ದಾರೆ.

600 ವರ್ಷಗಳ ಹಿಂದೆ ಕಾಶ್ಮೀರದಲ್ಲಿ ಮುಸಲ್ಮಾನರಾಗಿದ್ದವರು ಯಾರು? ಎಲ್ಲಾ ಕಾಶ್ಮೀರಿ ಪಂಡಿತರು ಇಸ್ಲಾಂಗೆ ಮತಾಂತರಗೊಂಡರು. ಹಾಗಾಗಿ ಎಲ್ಲರೂ ಹಿಂದೂ ಧರ್ಮದಲ್ಲಿ ಹುಟ್ಟಿದ್ದಾರೆ ಎಂಬ ಅರ್ಥದಲ್ಲಿ ಹೇಳಿದ್ದೇನೆ ಎಂದು ಸಮರ್ಥಿಸಿಕೊಂಡಿದ್ದಾರೆ.

lokesh

Recent Posts

KSOU | ಕುಲಸಚಿವೆಯಾಗಿ ಕೆಎಎಸ್‌ ಅಧಿಕಾರಿ ಕುಸುಮಾಕುಮಾರಿ ನೇಮಕ

ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾಕುಮಾರಿ ಅವರನ್ನು ಸರ್ಕಾರ ನೇಮಕ ಮಾಡಿದೆ. ಈವರೆಗೆ…

18 mins ago

ಏ.9ರವರೆಗೆ ರಾಜ್ಯಾದ್ಯಂತ ಯಲ್ಲೋ ಅಲರ್ಟ್, ಮಳೆ ಮುನ್ಸೂಚನೆ

ಮೈಸೂರು : ಭಾರತೀಯ ಹವಾಮಾನ ಇಲಾಖೆಯು ಕರಾವಳಿ ಕರ್ನಾಟಕ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಏ.9ರವರೆಗೆ ಯಲ್ಲೋ…

33 mins ago

ಕಾಂತರಾಜು-ಹೆಗಡೆ ವರದಿಗಳು ಇನ್ನೂ ಸ್ಟೋರೇಜ್‌ನಲ್ಲೇ ಏಕಿದೆ? ; ಕುಮಾರಸ್ವಾಮಿ ಪ್ರಶ್ನೆ

ದಾವಣಗೆರೆ : ಕಾಂತರಾಜು ವರದಿ ಈಗ ನಿಮ್ಮ ಬಳಿಯೇ ಇದೆ. ಜಯಪ್ರಕಾಶ ಹೆಗಡೆ ಅವರ ವರದಿಯು ಸ್ವೀಕರಿಸಿದ್ದೀರಿ. ಎರಡು ವರದಿಗಳನ್ನು…

57 mins ago

ಅಹಿಂದ ಹತ್ತಿಕ್ಕುತ್ತಿರುವ ಸಿದ್ದರಾಮಯ್ಯ : ಕುಮಾರಸ್ವಾಮಿ ಆರೋಪ

ದಾವಣಗೆರೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಮತ್ತು ಕುರ್ಚಿ ಉಳಿಸಿಕೊಳ್ಳಲು ತಮ್ಮನ್ನು ಬೆಳೆಸಿದ್ದ ಅಹಿಂದ ವರ್ಗವನ್ನೇ…

1 hour ago

ಕೊಡಗು | ಟೆಕ್ಕಿ ಶರಣ್ಯ ಕೊನೆಗೂ ಪತ್ತೆ

ಮಡಿಕೇರಿ : ಮಡಿಕೇರಿಯ ತಡಿಯಂಡಮೋಳ್ ಬೆಟ್ಟದಲ್ಲಿ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಶರಣ್ಯ ಕೊ‌ನೆಗೂ ಪತ್ತೆ…

1 hour ago

ತಮಿಳುನಾಡು ಚುನಾವಣೆ : ಅಫಿಡವಿಟ್‌ನಲ್ಲಿ 2 ಕ್ರಿಮಿನಲ್‌ ಪ್ರಕರಣ ಘೋಷಿಸಿಕೊಂಡ ವಿಜಯ್‌

ಚೆನ್ನೈ : ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ಹಾಗೂ ನಟ ವಿಜಯ್ ಅವರು ತಮಿಳುನಾಡು ವಿಧಾನಸಭಾ ಚುನಾವಣೆಗೆ…

2 hours ago