Mysore
24
scattered clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಬಿಎಸ್‌ವೈ ವಿರುದ್ಧ ಪೋಕ್ಸೋ ಪ್ರಕರಣ ಬಗ್ಗೆ ಗೃಹ ಸಚಿವರು ಹೇಳಿದ್ದಿಷ್ಟು?

ಬೆಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಇದರ ಬೆನ್ನಲ್ಲೇ ಬಿಎಸ್‌ವೈ ಅವರ ಬಂಧನ ಭೀತಿ ಎದುರಾಗಿದ್ದು, ಈ ಕುರಿತು ರಾಜ್ಯ ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಮಾತನಾಡಿದ್ದಾರೆ.

ಯಡಿಯೂರಪ್ಪ ಒಬ್ಬ ಹಿರಿಯ ರಾಜಕಾರಣಿ. ಇದರಲ್ಲಿ ಯಾವುದೇ ರಾಜಕೀಯ ದುರುದ್ದೇಶ ಇಲ್ಲ. ನಿನ್ನೆ ರಾತ್ರಿ ಒಬ್ಬ ಮಹಿಳೆ ದೂರು ಕೊಟ್ಟಿದ್ದು, ಈ ದೂರು ಪರಿಗಣಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಕಾನೂನು ಪ್ರಕಾರ ತನಿಖೆ ಮಾಡುತ್ತಿದ್ದಾರೆ ಎಂದರು.

ಇದು ಒಬ್ಬ ಮಾಜಿ ಮುಖ್ಯಮಂತ್ರಿ ವಿಷಯಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದ್ದು, ಬಹಳ ಸೂಕ್ಷ್ಮ ವಿಷಯವಾಗಿದೆ. ತನಿಖೆ ಆಗುವವರೆಗೂ ಯಾವುದೇ ವಿಷಯ ತಿಳಿಸಲು ಸಾಧ್ಯವಿಲ್ಲ ಎಂದಿದ್ದಾರೆ.

ಅಗತ್ಯ ಬಿದ್ದರೆ ಮಹಿಳೆಗೆ ರಕ್ಷಣೆ ಕೊಡುತ್ತೇವೆ. ಅವರನ್ನು ವಶಕ್ಕೆ ಪಡೆಯುವ ಸಂಬಂಧ ತನಿಖೆಯ ಮೇಲೆ ನಿರ್ಧಾರ ಮಾಡಲಾಗುತ್ತದೆ. ಇದರ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆಗೂ ಚರ್ಚೆ ಮಾಡಿದ್ದೇವೆ. ಮುಖ್ಯಮಂತ್ರಿ ಕೂಡ ಇದರ ಬಗ್ಗೆ ಮಾಹಿತಿ ಪಡೆದಿದ್ದಾರೆ ಎಂದು ತಿಳಿಸಿದರು.

ಯಡಿಯೂರಪ್ಪ ವಿರುದ್ಧ ದೂರು ಕೊಟ್ಟ ಮಹಿಳೆ ಮಾನಸಿಕ ಅಸ್ವಸ್ಥೆ ಎಂದು ಹೇಳಲಾಗುತ್ತಿದೆ. ದೂರನ್ನು ಟೈಪ್‌ ಮಾಡಿಕೊಟ್ಟಿದ್ದು, ಕೈಯಿಂದ ಬರೆದು ನೀಡಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ ಎಂದು ಹೇಳಿದರು.

Tags: