ಬೆಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಇದರ ಬೆನ್ನಲ್ಲೇ ಬಿಎಸ್‌ವೈ ಅವರ ಬಂಧನ ಭೀತಿ ಎದುರಾಗಿದ್ದು, ಈ ಕುರಿತು ರಾಜ್ಯ ಗೃಹ ಸಚಿವ ಡಾ. ಜಿ ಪರಮೇಶ್ವರ್ ಮಾತನಾಡಿದ್ದಾರೆ.
ಯಡಿಯೂರಪ್ಪ ಒಬ್ಬ ಹಿರಿಯ ರಾಜಕಾರಣಿ. ಇದರಲ್ಲಿ ಯಾವುದೇ ರಾಜಕೀಯ ದುರುದ್ದೇಶ ಇಲ್ಲ. ನಿನ್ನೆ ರಾತ್ರಿ ಒಬ್ಬ ಮಹಿಳೆ ದೂರು ಕೊಟ್ಟಿದ್ದು, ಈ ದೂರು ಪರಿಗಣಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಕಾನೂನು ಪ್ರಕಾರ ತನಿಖೆ ಮಾಡುತ್ತಿದ್ದಾರೆ ಎಂದರು.
ಇದು ಒಬ್ಬ ಮಾಜಿ ಮುಖ್ಯಮಂತ್ರಿ ವಿಷಯಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದ್ದು, ಬಹಳ ಸೂಕ್ಷ್ಮ ವಿಷಯವಾಗಿದೆ. ತನಿಖೆ ಆಗುವವರೆಗೂ ಯಾವುದೇ ವಿಷಯ ತಿಳಿಸಲು ಸಾಧ್ಯವಿಲ್ಲ ಎಂದಿದ್ದಾರೆ.
ಅಗತ್ಯ ಬಿದ್ದರೆ ಮಹಿಳೆಗೆ ರಕ್ಷಣೆ ಕೊಡುತ್ತೇವೆ. ಅವರನ್ನು ವಶಕ್ಕೆ ಪಡೆಯುವ ಸಂಬಂಧ ತನಿಖೆಯ ಮೇಲೆ ನಿರ್ಧಾರ ಮಾಡಲಾಗುತ್ತದೆ. ಇದರ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆಗೂ ಚರ್ಚೆ ಮಾಡಿದ್ದೇವೆ. ಮುಖ್ಯಮಂತ್ರಿ ಕೂಡ ಇದರ ಬಗ್ಗೆ ಮಾಹಿತಿ ಪಡೆದಿದ್ದಾರೆ ಎಂದು ತಿಳಿಸಿದರು.
ಯಡಿಯೂರಪ್ಪ ವಿರುದ್ಧ ದೂರು ಕೊಟ್ಟ ಮಹಿಳೆ ಮಾನಸಿಕ ಅಸ್ವಸ್ಥೆ ಎಂದು ಹೇಳಲಾಗುತ್ತಿದೆ. ದೂರನ್ನು ಟೈಪ್ ಮಾಡಿಕೊಟ್ಟಿದ್ದು, ಕೈಯಿಂದ ಬರೆದು ನೀಡಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ ಎಂದು ಹೇಳಿದರು.
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…
ಬೆಳಗಾವಿ: ಸುವರ್ಣ ಸೌಧದಲ್ಲಿ ಗುರುವಾರ ನಡೆದ ವಿಧಾನ ಪರಿಷತ್ ಕಲಾಪದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ…
ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದ ಬಳಕೆ ಮಾಡಿರುವ ಬಗ್ಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯವರ ವಿರುದ್ಧ…
ಮೈಸೂರು: ಸಂಸತ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಎಸಗಿರುವುದನ್ನು ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯದ…
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ…