ಪೋಕ್ಸೋ ಪ್ರಕರಣದಲ್ಲಿ ಅಗತ್ಯಬಿದ್ದರೆ ಬಿಎಸ್‌ವೈ ಬಂಧನ: ಗೃಹ ಸಚಿವ ಪರಮೇಶ್ವರ್‌

ತುಮಕೂರು: ಅಗತ್ಯ ಬಿದ್ದರೆ ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರನ್ನು ಸಿಐಡಿ ಅಧಿಕಾರಿಗಳು ಬಂಧಿಸಲಿದ್ದಾರೆ ಎಂದು ರಾಜ್ಯ ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಅವರು ಗುರುವಾರ (ಜೂನ್‌.13) ತುಮಕೂರಿನಲ್ಲಿ ಹೇಳಿದ್ದಾರೆ.

ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್‌ವೈ ಅವರ ಬಂಧನ ಆಗಲಿದೆಯಾ? ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುವ ವೇಳೆ ಗೃಹ ಸಚಿವರು ಈ ರೀತಿ ಹೇಳಿದ್ದಾರೆ.

ಯಡಿಯೂರಪ್ಪ ಬಂದು ನೋಟಿಸ್‌ಗೆ ಉತ್ತರ ನೀಡಬೇಕಾಗುತ್ತದೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್‌. 15 ಒಳಗೆ ಚಾರ್ಜ್‌ಶೀಟ್‌ ಸಲ್ಲಿಸಬೇಕು ಎಂದಿದೆ. ಹೀಗಾಗಿ ಯಡಿಯೂರಪ್ಪ ಅವರಿಗೆ ನೋಟಿಸ್‌ ನೀಡಿದ್ದಾರೆ. ಈ ಸಂಬಂಧ ಯಾವುದೇ ಪ್ರತಿಕ್ರಿಯೆ ಬರದೇ ಹೋದಲ್ಲಿ ಬಿಎಸ್‌ವೈ ಬಂಧನವಾಗಲಿದೆ. ಈ ವಿಚಾರವಾಗಿ ಈಗಲೇ ಏನು ಹೇಳಲಾರೆ ಎಂದು ಗೃಹ ಸಚಿವರು ತಿಳಿಸಿದರು.