ಚಿಕ್ಕಬಳ್ಳಾಪುರ : ಕೆಎಸ್‌ಆರ್‌ಟಿಸಿ ಬಸ್ ಹಾಗೂ ಮಿನಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಚಿನ್ನಸಂದ್ರ ಗೇಟ್ ಬಳಿ ನಡೆದಿದೆ. ಘಟನೆಯಲ್ಲಿ ಮಿನಿ ಬಸ್ ಸಂಪೂರ್ಣ ನಜ್ಜುಗುಜ್ಜಾಗಿದ್ದು ಮಿನಿ ಬಸ್‌ನಲ್ಲಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ.
ಮೃತ ವ್ಯಕ್ತಿಯನ್ನು ಕೈವಾರ ಮೂಲದ 40 ವರ್ಷದ ಇಲ್ಲು ಎಂದು ಗುರುತಿಸಲಾಗಿದೆ. ಕೆಎಸ್‌ಆರ್‌ಟಿಸಿ ಬಸ್‌ನ ಮುಂಭಾಗ ಸಂಪೂರ್ಣ ಜಖಂ ಆಗಿದ್ದು ಮಿನಿ ಬಸ್ ಸಂಪೂರ್ಣ ಛಿದ್ರ ಛಿದ್ರವಾಗಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು ಮೂವರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದಿಂದ ಚಿಂತಾಮಣಿ ಬೆಂಗಳೂರು ಮಾರ್ಗದಲ್ಲಿ ಬಹಳಷ್ಟು ಟ್ರಾಫಿಕ್ ಜಾಮ್ ಉಂಟಾಗಿದ್ದು ಪೊಲೀಸರು ಟ್ರಾಫಿಕ್ ಕ್ಲಿಯರ್ ಮಾಡುವ ಮೂಲಕ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಈ ಸಂಬಂಧ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ನವೀನ್ ಡಿಸೋಜ ೧,೯೪೬ ಲಸಿಕೆದಾರರು, ೮೫ ಮೇಲ್ವಿಚಾರಕರು ೯೭೩ ಮನೆ ಭೇಟಿ ನೀಡುವ ತಂಡ ರಚನೆ ಪ್ರವಾಸಿಗರು, ವಲಸೆ ಕಾರ್ಮಿಕರ…
ಸೂರ್ಯಪುತ್ರ ಯಾರಾದ್ರೂ ಮತ್ತೆ ಮತ್ತೆ ಸಿಗ್ತಾನೆ ಇದ್ರೆ ‘ಭೂಮಿ ದುಂಡಗಿದೆ, ಅದ್ಕೆ ಮತ್ತೆ ಮತ್ತೆ ಎದುರುಬದುರಾಗೋದು’ ಅನ್ನೋ ಮಾತು ಕೇಳಿರ್ತೇವೆ.…
ತೀರಿಹೋದ ಕನ್ನಡದ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಿಸಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಈ ಉದ್ದೇಶಿತ ಸ್ಮಾರಕದ…
ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…
ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…