BREAKING NEWS

ಬಸ್‌ಗಳ ನಡುವೆ ಭೀಕರ ಅಪಘಾತ : ಮಿನಿ ಬಸ್ ಛಿದ್ರ

ಚಿಕ್ಕಬಳ್ಳಾಪುರ : ಕೆಎಸ್‌ಆರ್‌ಟಿಸಿ ಬಸ್ ಹಾಗೂ ಮಿನಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಚಿನ್ನಸಂದ್ರ ಗೇಟ್ ಬಳಿ ನಡೆದಿದೆ. ಘಟನೆಯಲ್ಲಿ ಮಿನಿ ಬಸ್ ಸಂಪೂರ್ಣ ನಜ್ಜುಗುಜ್ಜಾಗಿದ್ದು ಮಿನಿ ಬಸ್‌ನಲ್ಲಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ.

ಮೃತ ವ್ಯಕ್ತಿಯನ್ನು ಕೈವಾರ ಮೂಲದ 40 ವರ್ಷದ ಇಲ್ಲು ಎಂದು ಗುರುತಿಸಲಾಗಿದೆ. ಕೆಎಸ್‌ಆರ್‌ಟಿಸಿ ಬಸ್‌ನ ಮುಂಭಾಗ ಸಂಪೂರ್ಣ ಜಖಂ ಆಗಿದ್ದು ಮಿನಿ ಬಸ್ ಸಂಪೂರ್ಣ ಛಿದ್ರ ಛಿದ್ರವಾಗಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು ಮೂವರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದಿಂದ ಚಿಂತಾಮಣಿ ಬೆಂಗಳೂರು ಮಾರ್ಗದಲ್ಲಿ ಬಹಳಷ್ಟು ಟ್ರಾಫಿಕ್ ಜಾಮ್ ಉಂಟಾಗಿದ್ದು ಪೊಲೀಸರು ಟ್ರಾಫಿಕ್ ಕ್ಲಿಯರ್ ಮಾಡುವ ಮೂಲಕ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಈ ಸಂಬಂಧ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

lokesh

Recent Posts

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

3 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

3 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

3 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

4 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

4 hours ago

ʼಮಣ್ಣಿನ ಗಣಪನಿಗೆ ಮನ್ನಣೆಗೆ ಸಿಗಲಿʼ

ಭಾರತಿ ಸಜ್ಜನ್‌ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…

4 hours ago