ಗುಜರಾತ್ : ಗುಜರಾತ್ ಬಾವ್ಲಾ-ಬಗೋದರ್ ಹೆದ್ದಾರಿಯಲ್ಲಿ ಎರಡು ಟ್ರಕ್ಗಳ ನಡುವೆ ಡಿಕ್ಕಿ ಸಂಭವಿಸಿದ್ದು, 10 ಮಂದಿ ಸಾವನ್ನಪ್ಪಿದ್ದಾರೆ. ಈ ಕುರಿತು ಅಹಮದಾಬಾದ್ ಗ್ರಾಮಾಂತರ ಎಸ್ಪಿ ಮಾಹಿತಿ ನೀಡಿದ್ದಾರೆ.
ರಾಷ್ಟ್ರೀಯ ಹೆದ್ದಾರಿಯ ಬಾಗೋದರ ಬಳಿ ರಸ್ತೆಯಲ್ಲಿ ನಿಂತಿದ್ದ ಲಾರಿಗೆ ಸಣ್ಣ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಸುಮಾರು 10 ಮಂದಿ ಸಾವನ್ನಪ್ಪಿದ್ದಾರೆ. ಮಿನಿ ಟ್ರಕ್‌ನಲ್ಲಿದ್ದವರು ಚೋಟಿಲಾಗೆ ಭೇಟಿ ನೀಡಿ ಹಿಂತಿರುಗುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಅಪಘಾತದ ಮಾಹಿತಿ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಪ್ರಾಥಮಿಕ ಮಾಹಿತಿ ಪ್ರಕಾರ, ಮಿನಿ ಟ್ರಕ್ ಚೋಟಿಲಾಗೆ ಭೇಟಿ ನೀಡಿ ಅಹಮದಾಬಾದ್‌ಗೆ ಬರುತ್ತಿತ್ತು. ನಂತರ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಮುಂದೆ ಮೂರು ಜನ ಮತ್ತು ಹಿಂದೆ 10 ಜನ ಕುಳಿತಿದ್ದರು.
ಈ ಭೀಕರ ಅಪಘಾತದಲ್ಲಿ 10 ಮಂದಿ ಸಾವನ್ನಪ್ಪಿದ್ದಾರೆ. ಘಟನೆ ತಿಳಿಯುತ್ತಿದ್ದಂತೆ ಪೊಲೀಸರು ಮತ್ತು ಸ್ಥಳೀಯರು ಸ್ಥಳಕ್ಕೆ ಆಗಮಿಸಿದರು. ಗಾಯಗೊಂಡ ಮೂವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರಲ್ಲಿ ಐವರು ಮಹಿಳೆಯರು, ಇಬ್ಬರು ಪುರುಷರು ಹಾಗೂ ಮೂವರು ಮಕ್ಕಳು ಸೇರಿದ್ದಾರೆ. ಬಾಗೋದ್ರ ಬಳಿ ಅಪಘಾತಕ್ಕೀಡಾದವರೆಲ್ಲರೂ ಕಪಾಡ್ವಂಜ್‌ನ ಸುನಾದ ಗ್ರಾಮದ ನಿವಾಸಿಗಳು ಎಂದು ಹೇಳಲಾಗಿದೆ.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…