Mysore
22
light rain

Social Media

ಸೋಮವಾರ, 28 ಸೆಪ್ಟೆಂಬರ್ 2026
Light
Dark

ಮೈಸೂರಿನಲ್ಲಿ ಭೀಕರ ರಸ್ತೆ ಅಪಘಾತ : ಗ್ರಾಪಂ ಸದಸ್ಯ ಸ್ಥಳದಲ್ಲೇ ಸಾವು

ಮೈಸೂರು : ಸಾರಿಗೆ ಬಸ್ ಹಾಗೂ ಸ್ವಿಫ್ಟ್ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಗ್ರಾಮ ಪಂಚಾಯಿತಿ ಸದಸ್ಯ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಬನ್ನಿಕುಪ್ಪೆ ಗ್ರಾಮದ ಬಳಿ ಘಟನೆ ನಡೆದಿದ್ದು, ನಿಲುವಾಗಿಲು ಗ್ರಾಪಂ ಸದಸ್ಯ ಭಾಸ್ಕರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಭಾಸ್ಕರ್ ಸ್ವಿಫ್ಟ್ ಕಾರಿನಲ್ಲಿ ತನ್ನ ಪತ್ನಿ, ಪುತ್ರ ಹಾಗೂ ತಾಯಿಯೊಂದಿಗೆ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಸದ್ಯ ಗಾಯಾಳುಗಳನ್ನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!