ಚಿಕ್ಕಬಳ್ಳಾಪುರ : ವ್ಯಕ್ತಿಯೊಬ್ಬ ಇನ್ನೋರ್ವ ವ್ಯಕ್ತಿಯ ಕತ್ತು ಕೊಯ್ದು ರಕ್ತ ಕುಡಿದಿರುವ ಬೀಭತ್ಸಕಾರಿ ಘಟನೆ ನಾಲ್ಕು ದಿನಗಳ ಹಿಂದೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ವ್ಯಕ್ತಿಯೊಬ್ಬನ ಕತ್ತಿನ ರಕ್ತ ಕುಡಿಯುವುದು ವಿಡಿಯೋದಲ್ಲಿ ಸೆರೆಯಾಗಿದೆ. ಈ ವಿಡಿಯೋ ವೈರಲ್ ಆದ ಬಳಿಕ ಘಟನೆ ಬೆಳಕಿಗೆ ಬಂದಿದೆ.ಚಿಂತಾಮಣಿ ತಾಲೂಕಿನ ಬಟ್ಲಹಳ್ಳಿ ನಿವಾಸಿ ವಿಜಯ್ ಎಂಬಾತ ಚೇಳೂರು ತಾಲೂಕಿನ ಮಾಡೇಂಪಲ್ಲಿ ನಿವಾಸಿ ಮಾರೇಶ್ ಮೇಲೆ ಹಲ್ಲೆ ಮಾಡಿ, ರಕ್ತ ಕುಡಿದಿದ್ದಾನೆ. ತೀವ್ರವಾಗಿ ಗಾಯಗೊಂಡಿರುವ ಮಾರೇಶ್ನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ವಿಜಯ್ನನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.
ಕಾರಣವೇನು? : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಾರೇಶ್ನನ್ನು ಚಿಂತಾಮಣಿ ತಾಲೂಕಿನ ಸಿದ್ದೇಪಲ್ಲಿ ಕ್ರಾಸ್ ಬಳಿ ವಿಜಯ್ ಕರೆಸಿಕೊಂಡಿದ್ದ. ಬಳಿಕ ಇಬ್ಬರ ಮಧ್ಯೆ ಮಾತಿಗೆ ಮಾತು ಬೆಳೆದಿದೆ. ಈ ವೇಳೆ ಮಾರೇಶ್ನ ಕತ್ತಿಗೆ ಚಾಕುವಿನಿಂದ ವಿಜಯ್ ಇರಿದು ಹಲ್ಲೆ ಮಾಡಿದ್ದಾನೆ. ಬಳಿಕ ಹಲ್ಲೆಯಿಂದ ಅಸ್ವಸ್ಥನಾಗಿ ಕೆಳಗೆ ಬಿದ್ದ ಮಾರೇಶ್ನ ಕತ್ತಿನಿಂದ ವಿಜಯ್ ರಕ್ತ ಕುಡಿದಿದ್ದಾನೆ. ಇದನ್ನು ವಿಡಿಯೋದಲ್ಲಿ ಸೆರೆ ಹಿಡಿದಿದ್ದಾರೆ.
ಕಳೆದ ನಾಲ್ಕು ದಿನಗಳ ಹಿಂದೆ ಈ ಘಟನೆ ನಡೆದಿದ್ದು, ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ.
ಮಹಾದೇಶ್ ಎಂ ಗೌಡ ಹನೂರು: ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರರಿಬ್ಬರೂ…
ಮಹಾದೇಶ್ ಎಂ ಗೌಡ ಹನೂರು: ದ್ವಿಚಕ್ರ ವಾಹನ ಸವಾರ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡು ಮೃತಪಟ್ಟಿರುವ ಘಟನೆ…
ಮೈಸೂರು: ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್…
ಮಹಾದೇಶ್ ಎಂ ಗೌಡ ಹನೂರು: ಅಂತರ ರಾಜ್ಯ ನೆರೆಯ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಾಮಾಪುರ ರಸ್ತೆಯಲ್ಲಿ ನಿತ್ಯ ಗಜರಾಜ ಎಂಟ್ರಿ…
ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಚಿತಾವಣೆಯಿಂದ ಬಳ್ಳಾರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಹೆಣ ಬಿದ್ದಿದೆ ಎಂದು ಹೇಳಿಕೆ…
ಬೆಂಗಳೂರು: ನಾಯಕತ್ವ ಬದಲಾವಣೆ ಚರ್ಚೆಗೆ ಹೈಕಮಾಂಡ್ ಸ್ಪಷ್ಟನೆ ಕೊಡಬೇಕು ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಒತ್ತಾಯಿಸಿದ್ದಾರೆ. ಜನವರಿ.16ಕ್ಕೆ ಸಿಹಿಸುದ್ದಿ ಬರಲಿದೆ…