BREAKING NEWS

ವ್ಯಕ್ತಿಯ ಕತ್ತು ಸೀಳಿ ರಕ್ತ ಕುಡಿದು ಬೀಭತ್ಸ ಕೃತ್ಯ : ಬೆಚ್ಚಿಬಿದ್ದ ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ : ವ್ಯಕ್ತಿಯೊಬ್ಬ ಇನ್ನೋರ್ವ ವ್ಯಕ್ತಿಯ ಕತ್ತು ಕೊಯ್ದು ರಕ್ತ ಕುಡಿದಿರುವ ಬೀಭತ್ಸಕಾರಿ ಘಟನೆ ನಾಲ್ಕು ದಿನಗಳ ಹಿಂದೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ವ್ಯಕ್ತಿಯೊಬ್ಬನ ಕತ್ತಿನ ರಕ್ತ ಕುಡಿಯುವುದು ವಿಡಿಯೋದಲ್ಲಿ ಸೆರೆಯಾಗಿದೆ. ಈ ವಿಡಿಯೋ ವೈರಲ್ ಆದ ಬಳಿಕ ಘಟನೆ ಬೆಳಕಿಗೆ ಬಂದಿದೆ.ಚಿಂತಾಮಣಿ ತಾಲೂಕಿನ ಬಟ್ಲಹಳ್ಳಿ ನಿವಾಸಿ ವಿಜಯ್ ಎಂಬಾತ ಚೇಳೂರು ತಾಲೂಕಿನ ಮಾಡೇಂಪಲ್ಲಿ ನಿವಾಸಿ ಮಾರೇಶ್ ಮೇಲೆ ಹಲ್ಲೆ ಮಾಡಿ, ರಕ್ತ ಕುಡಿದಿದ್ದಾನೆ. ತೀವ್ರವಾಗಿ ಗಾಯಗೊಂಡಿರುವ ಮಾರೇಶ್​​ನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ವಿಜಯ್​ನನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.

ಕಾರಣವೇನು? : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಾರೇಶ್​ನನ್ನು ಚಿಂತಾಮಣಿ ತಾಲೂಕಿನ ಸಿದ್ದೇಪಲ್ಲಿ ಕ್ರಾಸ್ ಬಳಿ ವಿಜಯ್ ಕರೆಸಿಕೊಂಡಿದ್ದ. ಬಳಿಕ ಇಬ್ಬರ ಮಧ್ಯೆ ಮಾತಿಗೆ ಮಾತು ಬೆಳೆದಿದೆ. ಈ ವೇಳೆ ಮಾರೇಶ್​ನ ಕತ್ತಿಗೆ ಚಾಕುವಿನಿಂದ ವಿಜಯ್ ಇರಿದು ಹಲ್ಲೆ ಮಾಡಿದ್ದಾನೆ. ಬಳಿಕ ಹಲ್ಲೆಯಿಂದ ಅಸ್ವಸ್ಥನಾಗಿ ಕೆಳಗೆ ಬಿದ್ದ ಮಾರೇಶ್​ನ ಕತ್ತಿನಿಂದ ವಿಜಯ್ ರಕ್ತ ಕುಡಿದಿದ್ದಾನೆ. ಇದನ್ನು ವಿಡಿಯೋದಲ್ಲಿ ಸೆರೆ ಹಿಡಿದಿದ್ದಾರೆ.
ಕಳೆದ ನಾಲ್ಕು ದಿನಗಳ ಹಿಂದೆ ಈ ಘಟನೆ ನಡೆದಿದ್ದು, ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ.

lokesh

Recent Posts

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

3 hours ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

3 hours ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

3 hours ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

13 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

14 hours ago